ಮಂಗಳೂರು:ಪೌರತ್ವ ಕಾಯ್ದೆ ಜಾರಿ ವಿರೋಧಿಸಿ ಕಳೆದ ವರ್ಷ ಡಿ.19 ರಂದು ಮಂಗಳೂರಿನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆ ಹಾಗೂ ಗೋಲಿಬಾರ್ಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪೂರ್ಣಗೊಂಡಿದೆ. ಸರ್ಕಾರಕ್ಕೆ 2,500 ಪುಟಗಳ ವರದಿ ಸಲ್ಲಿಕೆಯಾಗಿದೆ.
ಪೌರತ್ವ ಕಾಯ್ದೆ ಜಾರಿ ವಿರೋಧಿಸಿ ಮಂಗಳೂರಿನಲ್ಲಿ 2019 ಡಿ.19 ರಂದು ಹಿಂಸಾತ್ಮಕ ಪ್ರತಿಭಟನೆ ನಡೆದ ಸಂದರ್ಭದಲ್ಲಿ ಇಬ್ಬರು ಗೋಲಿಬಾರ್ಗೆ ಬಲಿಯಾಗಿದ್ದರು. ಘಟನೆಯ ಬಗ್ಗೆ ಪರ ವಿರೋಧ ಮಾತುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿತ್ತು. ಉಡುಪಿಯ ಜಿಲ್ಲಾಧಿಕಾರಿ ಜಗದೀಶ್ ಜಿ. ಅವರನ್ನು ತನಿಖಾಧಿಕಾರಿಯಾಗಿ ನೇಮಿಸಿ ಮೂರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಆದೇಶಿಸಿತ್ತು. ಆರಂಭದಲ್ಲಿ ತನಿಖೆ ವೇಗಗತಿಯನ್ನು ಪಡೆದಿದ್ದರೂ, ಆ ಬಳಿಕ ಕೊರೊನಾ ತನಿಖೆಗೆ ಅಡ್ಡಿಯಾಯಿತು. ಹಾಗಾಗಿ ತನಿಖೆಯನ್ನು ಮತ್ತೆ ಮೂರು ತಿಂಗಳ ಅವಧಿಯನ್ನು ವಿಸ್ತರಣೆ ಮಾಡಲಾಯಿತು.