ಮಂಗಳೂರು: ಬಜ್ಪೆಯಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಭವನ ವಿಸ್ತರಣಾ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಭಾಗವಹಿಸಿದ್ದರು.
ಇದೇ ವೇಳೆ ಮಾತನಾಡಿದ ಅವರು, ಅನೇಕ ವರ್ಷಗಳಿಂದ ವ್ಯಾಪಾರದಲ್ಲಿ ಎಲ್ಲರಿಗಿಂತಲೂ ವೇಗದಲ್ಲಿ ಪ್ರಗತಿ ಕಂಡ ಸಾಂಸ್ಕೃತಿಕ ನಗರ ಮಂಗಳೂರು. ಇಲ್ಲಿ ವ್ಯಾಪಾರದ ಬಹುದೊಡ್ಡ ಕೇಂದ್ರಗಳಿದ್ದು, ವ್ಯಾಪಾರ ಮಾಡುವುದಗೋಸ್ಕರ ಇಲ್ಲಿಗೆ ದೇಶ ವಿದೇಶಗಳಿಂದ ದೊಡ್ಡ ದೊಡ್ಡ ವ್ಯಾಪಾರಸ್ಥರು ಆಗಮಿಸುತ್ತಿರುತ್ತಾರೆ. ಆದ್ದರಿಂದ ಕರ್ನಾಟಕದಲ್ಲಿಯೇ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉತ್ತಮ ರೀತಿಯಲ್ಲಿ ಅಭಿವೃದ್ಧಿ ಮಾಡಲು ಇಂದು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.