ಮಂಗಳೂರು:ನಗರದ ಸರ್ಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ನಾಳೆಯಿಂದ ಜು.5ರವರೆಗೆ ಹೊರ ರೋಗಿ ಮತ್ತು ಒಳ ರೋಗಿ ದಾಖಲಾತಿಗಳ ಸೇವೆಗಳನ್ನು ಸ್ಥಗಿತಗೊಳಿಸಲಾಗಿದ್ದು, ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಲೇಡಿಗೋಶನ್ ಆಸ್ಪತ್ರೆಯ ಹೆಚ್ಚಿನ ವೈದ್ಯರು ಹಾಗೂ ಸಿಬ್ಬಂದಿ ಕ್ವಾರೆಂಟೈನ್ ಇರುವ ಹಿನ್ನೆಲೆಯಲ್ಲಿ ಮತ್ತು ಆಸ್ಪತ್ರೆಯ ಎಲ್ಲಾ ವಿಭಾಗಗಳಿಗೂ ಫ್ಯೂಮಿಗೇಶನ್ ಹಾಗೂ ಸ್ಯಾನಿಟೈಸಿಂಗ್ ಮಾಡುವ ಉದ್ದೇಶದಿಂದ ನಾಳೆಯಿಂದ ಜು.5ರಂದು ಹೊರರೋಗಿ ಹಾಗೂ ಒಳರೋಗಿ ದಾಖಲಾತಿಗಳನ್ನು ಸ್ಥಗಿತಗೊಳಿಸಲಾಗಿದೆ.
ಜು.5ರವರೆಗೆ ಲೇಡಿಗೋಶನ್ ಆಸ್ಪತ್ರೆಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ - Mangalore latest news
ಮಂಗಳೂರಿನ ಸರ್ಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ನಾಳೆಯಿಂದ ಜು.5ರವರೆಗೆ ಹೊರ ರೋಗಿ ಮತ್ತು ಒಳ ರೋಗಿ ದಾಖಲಾತಿಗಳ ಸೇವೆಗಳನ್ನು ಸ್ಥಗಿತಗೊಳಿಸಲಾಗಿದ್ದು, ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
Mangalore
ಆದರೆ ದಾಖಲಾಗಿರುವ ರೋಗಿಗಳ ಚಿಕಿತ್ಸೆಗೆ ಪರ್ಯಾಯ ವ್ಯವಸ್ಥೆಗೆ Ab-Ark ಯೋಜನೆಯಡಿಯಲ್ಲಿ ಖಾಸಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಿಗೆ ಕಳುಹಿಸಲು ಶಿಫಾರಸ್ಸು ಪತ್ರ ನೀಡಲಾಗುವುದು.
ಆದರೆ ಜು.6ರಿಂದ ಸರ್ಕಾರಿ ಲೇಡಿಗೋಶನ್ ಆಸ್ಪತ್ರೆಯು ಎಂದಿನಂತೆ ಕಾರ್ಯ ನಿರ್ವಹಿಸಲಿದೆ ಎಂದು ಲೇಡಿಗೋಶನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಸವಿತಾ ತಿಳಿಸಿದ್ದಾರೆ.