ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ನಿರ್ಗಮನ ಹಿನ್ನೆಲೆಯಲ್ಲಿ ಇಂದು ಶಶಿಕುಮಾರ್ ಅಧಿಕಾರ ಸ್ವೀಕರಿಸಿದರು.
ಮಂಗಳೂರು ನೂತನ ಪೊಲೀಸ್ ಕಮಿಷನರ್ ಆಗಿ ಶಶಿಕುಮಾರ್ ಅಧಿಕಾರ ಸ್ವೀಕಾರ - Shashi Kumar
ಮಂಗಳೂರು ನಗರ ಪೊಲೀಸ್ ಪೊಲೀಸ್ ಕಮಿಷನರ್ ಆಗಿ ಶಶಿಕುಮಾರ್ ಅಧಿಕಾರ ಸ್ವೀಕರಿಸಿ ಕಾನೂನು ಸುವ್ಯವಸ್ಥೆ ಕಾಪಾಡಲು ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಪೊಲೀಸ್ ರೀತಿಯಲ್ಲಿ ಕೆಲಸ ಮಾಡಿದರೆ ಅಪರಾಧ ರಹಿತ ಸಮಾಜ ನಿರ್ಮಾಣ ಸಾಧ್ಯ. ಪೊಲೀಸ್ ಕಾರ್ಯಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ. ಹಿಂದೆ ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯಲ್ಲಿದ್ದ ಪೋನ್ ಇನ್ ಕಾರ್ಯಕ್ರಮ ಮುಂದುವರಿಯುವ ಜೊತೆಗೆ ಪ್ರತಿ ಪೊಲೀಸ್ ಸಿಬ್ಬಂದಿ ಸಾರ್ವಜನಿಕರ ಅಹವಾಲು ಆಲಿಸುವ ಪೊಲ್ ವ್ಯವಸ್ಥೆ ರೂಪಿಸಬೇಕೆಂಬುದು ನನ್ನ ಚಿಂತನೆ.
ಮಂಗಳೂರಿನಲ್ಲಿ ಪೊಲೀಸ್ ಮೇಲೆ ಹಲ್ಲೆ ಪ್ರಕರಣಗಳು ಕೇಳಿ ಬರುತ್ತಿವೆ. ಸಾರ್ವಜನಿಕರ ಸೇವೆ ಮಾಡುವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವಂತಹ ಕೃತ್ಯ ಸಹಿಸಲು ಅಸಾಧ್ಯ. ಇಂತಹ ಘಟನೆ ನಡೆದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.