ಮಂಗಳೂರು :ಆಯುಧ ಪೂಜೆ ದಿನ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರಿಗೆ ತ್ರಿಶೂಲ ವಿತರಣೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನು ಪ್ರಕಾರ ತಪ್ಪಾಗಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದರು.
ತ್ರಿಶೂಲ ವಿತರಣೆ ಕುರಿತಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಪ್ರತಿಕ್ರಿಯೆ ನೀಡಿರುವುದು.. ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪರಿಶೀಲನೆ ನಡೆಸಿದಾಗ ಪ್ರತಿವರ್ಷ ಈ ರೀತಿ ಸಾಂಕೇತಿಕವಾಗಿ ತ್ರಿಶೂಲ ದೀಕ್ಷೆ ನೀಡಲಾಗುತ್ತಿದೆ ಎಂದು ಆಯೋಜಕರು ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ಕಲೆ ಹಾಕಲು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇವೆ. ಕಾನೂನು ಪ್ರಕಾರ ತಪ್ಪಾಗಿದ್ದರೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.
ಕಾರ್ಯಕರ್ತರಿಗೆ ತ್ರಿಶೂಲ ವಿತರಣೆ :
ಕಾರ್ಯಕರ್ತರಿಗೆ ತ್ರಿಶೂಲ ವಿತರಿಸಿದ್ದ ವಿಶ್ವ ಹಿಂದೂ ಪರಿಷತ್ ಆಯುಧ ಪೂಜೆಯ ನಿಮಿತ್ತ ನಗರದ ಕದ್ರಿಯಲ್ಲಿರುವ ವಿಶ್ವ ಹಿಂದೂ ಪರಿಷತ್ತಿನ ವಿಶ್ವಶ್ರೀ ಕಚೇರಿಯಲ್ಲಿ ವಿಹಿಂಪ ಮುಖಂಡರು, ಕಾರ್ಯಕರ್ತರಿಗೆ ತ್ರಿಶೂಲ ವಿತರಿಸಿದ್ದರು. ಈ ಕುರಿತಾತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ತ್ರಿಶೂಲ ವಿತರಣೆ ಕಾರ್ಯಕ್ರಮದಲ್ಲಿ ಬಜರಂಗದಳ ನಾಯಕ ರಘು ಸಕಲೇಶಪುರ, ವಿಹಿಂಪ ನಾಯಕ ಶರಣ್ ಪಂಪ್‌ವೆಲ್ ಮತ್ತಿತರರು ಪಾಲ್ಗೊಂಡಿದ್ದರು.
ಇದನ್ನೂ ಓದಿ: ಬಿಜೆಪಿ-ಕಾಂಗ್ರೆಸ್ನ ಒಬ್ಬೊಬ್ಬರದು ಸಿಡಿ ಫ್ಯಾಕ್ಟರಿ ಇದೆ, ಶೀಘ್ರ ಅವರೆಲ್ಲ ಬೆತ್ತಲಾಗ್ತಾರೆ : ಯತ್ನಾಳ್