ಮಂಗಳೂರು; ಇತ್ತೀಚಿಗೆ ತುಳು ಭಾಷೆಯನ್ನು ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರಿಸಬೇಕೆಂದು ಒತ್ತಾಯಿಸಿ ನಡೆದ ಟ್ವೀಟರ್ನಲ್ಲಿ ಹಲವಾರು ಗಣ್ಯರು ತುಳುಭಾಷೆಯಲ್ಲಿ ಟ್ವೀಟ್ ಮಾಡಿ ಬೆಂಬಲಿಸಿದ್ದಾರೆ. ಅದರಂತೆಯೇ ಇದೀಗ ಮಂಗಳೂರು ನಗರ ಪೊಲೀಸ್ ಕಮೀಷನರ್ ಕೂಡ ತುಳು ಭಾಷೆಯಲ್ಲಿ ಟ್ವೀಟ್ ಮಾಡುವ ಮೂಲಕ ತುಳುವರ ಪ್ರೀತಿಗೆ ಪಾತ್ರರಾಗಿದ್ದಾರೆ.
ತುಳುವಿನಲ್ಲಿ ಟ್ವೀಟ್ ಮಾಡಿದ ಮಂಗಳೂರು ಪೊಲೀಸ್ ಕಮೀಷನರ್
ಇತ್ತೀಚಿಗೆ ತುಳು ಭಾಷೆಯನ್ನು ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರಿಸಬೇಕೆಂದು ಒತ್ತಾಯಿಸಿ ನಡೆದ ಟ್ವೀಟರ್ನಲ್ಲಿ ಹಲವಾರು ಗಣ್ಯರು ತುಳುಭಾಷೆಯಲ್ಲಿ ಟ್ವೀಟ್ ಮಾಡಿ ಬೆಂಬಲಿಸಿದ್ದಾರೆ. ಅದರಂತೆಯೇ ಇದೀಗ ಮಂಗಳೂರು ನಗರ ಪೊಲೀಸ್ ಕಮೀಷನರ್ ಕೂಡ ತುಳು ಭಾಷೆಯಲ್ಲಿ ಟ್ವೀಟ್ ಮಾಡುವ ಮೂಲಕ ತುಳುವರ ಪ್ರೀತಿಗೆ ಪಾತ್ರರಾಗಿದ್ದಾರೆ.
ತುಳುವಿನಲ್ಲಿ ಟ್ವೀಟ್ ಮಾಡಿದ ಮಂಗಳೂರು ಪೊಲೀಸ್ ಕಮೀಷನರ್
ಇಂದು ಬೆಳಿಗ್ಗೆ 8 ಗಂಟೆಯಿಂದ 9 ಗಂಟೆ ತನಕ ಮಂಗಳೂರು ಪೊಲೀಸ್ ಪೆರೆಡ್ ನಡೆಯಲಿದ್ದು ಇದನ್ನು ಮೊದಲ ಬಾರಿಗೆ ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್, ಟ್ವಿಟರ್ ನಲ್ಲಿ ಲೈವ್ ಮಾಡಲಾಗುತ್ತದೆ. ಈ ವಿಚಾರವನ್ನು ಅವರು ಟ್ವೀಟ್ ನಲ್ಲಿ ತುಳು ಭಾಷೆಯಲ್ಲಿ ಬರೆಯುವ ಮೂಲಕ ತುಳುಭಾಷಿಕರ ಮೆಚ್ಚುಗೆ ಗೆ ಪಾತ್ರರಾಗಿದ್ದಾರೆ.
ಕರಾವಳಿ ಜನರ ಆಡುಭಾಷೆಯಾದ ತುಳುವಿನ ಲಿಪಿ ಬಳಕೆಯಲ್ಲಿ ಇಲ್ಲದಿದ್ದರೂ ಕನ್ನಡ ಲಿಪಿಯಲ್ಲಿ ತುಳು ಭಾಷೆ ಬರೆಯುವ ಮೂಲಕ ತುಳುವರು ಭಾಷಾಭಿಮಾನ ಮೆರೆಯುತ್ತಾರೆ.