ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಬ್ಯಾಂಕ್ ಗಳಲ್ಲೇ ಮುಂಚೂಣಿಯಲ್ಲಿರುವ ಎಸ್ಸಿಡಿಸಿಸಿ ಬ್ಯಾಂಕ್ ಆರ್ಥಿಕ ವರ್ಷದಲ್ಲಿ 50.08 ಕೋಟಿ ರೂಪಾಯಿ ಲಾಭ ಗಳಿಸಿದ್ದು, ಕಳೆದ ವರ್ಷಕ್ಕಿಂತ ಶೇ.48.82 ಏರಿಕೆ ಕಂಡಿದೆ. ಇದು ಎಸ್ ಸಿಡಿಸಿಸಿ ಬ್ಯಾಂಕ್ ನ ಇತಿಹಾಸದಲ್ಲಿಯೇ ಸಾರ್ವಕಾಲಿಕ ದಾಖಲೆಯಾಗಿದೆ ಎಂದು ಎಸ್ಸಿಡಿಸಿಸಿ ಬ್ಯಾಂಕ್ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹರ್ಷ ವ್ಯಕ್ತಪಡಿಸಿದರು.
ನಗರದ ಎಸ್ಸಿಡಿಸಿಸಿ ಬ್ಯಾಂಕ್ ನಲ್ಲಿಂದು ಮಾತನಾಡಿದ ಅವರು, ಈ ವರ್ಷ 11,598 ಕೋಟಿ ರೂ. ಒಟ್ಟು ವ್ಯವಹಾರ ದಾಖಲೆ ಮಾಡಿದ್ದು, ಈ ಮೂಲಕ ಕಳೆದ ವರ್ಷದ ವ್ಯವಹಾರಕ್ಕಿಂತ ಶೇಕಡಾ 14.87 ಏರಿಕೆ ಕಂಡಿದೆ. ಈ ಬಾರಿ 2022-23ನೇ ಸಾಲಿಗೆ 14 ಸಾವಿರ ಕೋಟಿ ರೂ. ವ್ಯವಹಾರದ ಗುರಿ ಹೊಂದಿದೆ. ಎಸ್ಸಿಡಿಸಿಸಿ ಬ್ಯಾಂಕ್, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯಾವುದೇ ಠೇವಣಾತಿ ಇಲ್ಲದೆ ತನ್ನ 109 ಶಾಖೆಯಲ್ಲಿ ಒಟ್ಟು 5,649.97 ಕೋಟಿ ರೂ. ಠೇವಣಿ ಸಂಗ್ರಹಿಸಿ ಸಾಧನೆಗೈದಿದೆ ಎಂದು ಮಾಹಿತಿ ನೀಡಿದರು.