ಸುಬ್ರಹ್ಮಣ್ಯ:2019-20 ನೇ ಸಾಲಿನ ಇನ್ಸ್ಪೈರ್ ಅವಾರ್ಡ್-ಮಾನಕ್ ವಿಜ್ಞಾನ ಮಾದರಿ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ಪೃಥ್ವಿಜಾ ಕೆ.ಪಿ (9ನೇ ತರಗತಿ) ಭಾಗವಹಿಸಿ ಬಹುಮಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.
ಮಾನಕ್ ವಿಜ್ಞಾನ ಮಾದರಿ ವಸ್ತು ಪ್ರದರ್ಶನ: ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಪೃಥ್ವಿಜಾ - ಮಾನಕ್ ವಿಜ್ಞಾನ ಮಾದರಿ ವಸ್ತು ಪ್ರದರ್ಶನ
ಇನ್ಸ್ಪೈರ್ ಅವಾರ್ಡ್-ಮಾನಕ್ ವಿಜ್ಞಾನ ಮಾದರಿ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಭಾಗವಹಿಸಿದ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.
ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ನವದೆಹಲಿ, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಬೆಂಗಳೂರು, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ದ.ಕ. ಜಿಲ್ಲೆ ಮಂಗಳೂರು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆದ ದ.ಕ. ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಇನ್ಸ್ಪೈರ್ ಅವಾರ್ಡ್-ಮಾನಕ್ ವಿಜ್ಞಾನ ಮಾದರಿ ವಸ್ತು ಪ್ರದರ್ಶನ ಸ್ಪರ್ಧೆಯ 2019-20 ರಲ್ಲಿ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ಪೃಥ್ವಿಜಾ ಕೆ.ಪಿ ಭಾಗವಹಿಸಿದ್ದು, ಬಹುಮಾನ ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.