ಮಂಗಳೂರು:ಮಂಗಳೂರಿನಲ್ಲಿ ದಾಖಲಾಗಿದ್ದ ಮೂರು ಶೂಟೌಟ್ ಪ್ರಕರಣಗಳಲ್ಲಿ ಬಂಧನದಲ್ಲಿರುವ ಭೂಗತ ದೊರೆ ಬನ್ನಂಜೆ ರಾಜನನ್ನು ಖುಲಾಸೆಗೊಳಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. 2000ನೇ ಇಸವಿಯಲ್ಲಿ ಬಂಟ್ಸ್ ಹಾಸ್ಟೆಲ್ ನಿವಾಸಿ ಇರವಿನ್ ಪಿಂಟೋ ಮತ್ತು ಅವರ ಪತ್ನಿ ರಾತ್ರಿ ಮದುವೆ ಸಮಾರಂಭಕ್ಕೆ ಹೋಗಿ ಮನೆಗೆ ವಾಪಸ್ ಆಗುವ ವೇಳೆ ಹೊಯಿಗೆ ಬಜಾರ್ ಎಂಬಲ್ಲಿ ಬೈಕ್‌ನಲ್ಲಿ ಬಂದ ಅಪರಿಚಿತರು ಕಾರನ್ನು ಅಡ್ಡಗಟ್ಟಿ ಶೂಟೌಟ್ ಮಾಡಿ ಕೊಲೆ ಯತ್ನ ನಡೆಸಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಬನ್ನಂಜೆ ರಾಜ ಮತ್ತು ಆತನ ಸಹಚರರ ಮೇಲೆ ಪ್ರಕರಣ ದಾಖಲಾಗಿತ್ತು.
2004ನೇ ಇಸವಿಯಲ್ಲಿ ರೋಹನ್ ಕಾರ್ಪೋರೇಶನ್ ಮಾಲೀಕ ರೋಹನ್ ಮೊಂತೆರೊ ಅವರ ಕಚೇರಿಯ ಮೇಲೆ ಅಪರಿಚಿತರು ಗುಂಡು ಹಾರಿಸಿ, ಕೊಲೆ ಯತ್ನ ನಡೆಸಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಬನ್ನಂಜೆ ರಾಜ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. 2011ರಲ್ಲಿ ಪೃಥ್ವಿ ಡೆವಲಪರ್ಸ್ ಮತ್ತು ಬಿಲ್ಡರ್ಸ್ ಮಾಲಕ ಸುರೇಶ ಭಂಡಾರಿ ಅವರು ತನ್ನ ಪತ್ನಿ ಮತ್ತು ಮಗಳೊಂದಿಗೆ ಕದ್ರಿ ಪಾರ್ಕ್ ಬಳಿ ಕಾರಿನಲ್ಲಿದ್ದ ಸಮಯ ಇಬ್ಬರು ಅಪರಿಚಿತರು ಬೈಕ್‌ನಲ್ಲಿ ಬಂದು ರಿವಾಲ್ವರ್‌ನಿಂದ ಶೂಟೌಟ್ ಮಾಡಿ ಕೊಲೆ ಯತ್ನ ನಡೆಸಿದ್ದರು. ಈ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ:ಭೂಗತ ಪಾತಕಿ ಬನ್ನಂಜೆ ರಾಜ ಆಪ್ತ ಮನೀಶ್ ಶೆಟ್ಟಿ ಗುಂಡೇಟಿಗೆ ಬಲಿ...!