ಮಂಗಳೂರು: ಅನುಮತಿ ಪಡೆಯದೆ ವಿದೇಶ ಪ್ರವಾಸ ಮಾಡಿದ ಪೊಲೀಸ್ ಇನ್ಸ್ಪೆಕ್ಟರ್ ಅವರನ್ನು ಸೇವೆಯಿಂದ ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್ ಅಮಾನತು ಮಾಡಿದ್ದಾರೆ. ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮೊಹಮ್ಮದ್ ಶರೀಫ್ ಅಮಾನತುಗೊಂಡವರು.
ಅನುಮತಿ ಪಡೆಯದೆ ದುಬೈ ಟೂರ್: ಮಂಗಳೂರು ಸಂಚಾರಿ ಪೊಲೀಸ್ ಇನ್ಸ್ಪೆಕ್ಟರ್ ಸಸ್ಪೆಂಡ್ - ಅನುಮತಿ ಪಡೆಯದೆ ದುಬೈ ಪ್ರವಾಸ ಪೊಲೀಸ್ ಇನ್ಸ್ಪೆಕ್ಟರ್ ಸಸ್ಪೆಂಡ್
ಧಾರ್ಮಿಕ ಕಾರ್ಯಕ್ರಮ ಇರುವುದಾಗಿ ತಿಳಿಸಿ ರಜೆ ಪಡೆದುಕೊಂಡು, ಅನುಮತಿ ಪಡೆಯದೆ ವಿದೇಶ ಪ್ರವಾಸ ಮಾಡಿದ ಪೊಲೀಸ್ ಇನ್ಸ್ಪೆಕ್ಟರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಮಂಗಳೂರು ಪೊಲೀಸ್ ಕಮೀಷನರ್ ಆದೇಶಿಸಿದ್ದಾರೆ.
ಪೊಲೀಸ್ ಇನ್ಸ್ಪೆಕ್ಟರ್ ಸಸ್ಪೆಂಡ್
ಇವರು ಮಾರ್ಚ್ 16 ರಿಂದ 20 ವರೆಗೆ ಊರಿನಲ್ಲಿ ಅತೀ ಅಗತ್ಯದ ಧಾರ್ಮಿಕ ಕಾರ್ಯಕ್ರಮ ಇರುವುದಾಗಿ ಮಾಹಿತಿ ನೀಡಿ ರಜೆ ಪಡೆದುಕೊಂಡಿದ್ದರು. ಈ ರೀತಿ ರಜೆ ಪಡೆದುಕೊಂಡು ಅನುಮತಿ ಪಡೆಯದೆ ವಿದೇಶಕ್ಕೆ ತೆರಳಿದ್ದರು. ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ಡಿಸಿಪಿ ಹರಿರಾಂ ಶಂಕರ್, ಮೊಹಮ್ಮದ್ ಶರೀಫ್ ರಜೆ ಪಡೆದುಕೊಂಡಿದ್ದರು. ಆದರೆ ವಿದೇಶಕ್ಕೆ ತೆರಳಲು ಅನುಮತಿ ಪಡೆದಿರಲಿಲ್ಲ. ಸೇವಾ ನಿಯಮದ ಪ್ರಕಾರ ಮೇಲಧಿಕಾರಿಗಳ ಅನುಮತಿ ಪಡೆದು ವಿದೇಶಕ್ಕೆ ತೆರಳಬೇಕಾಗಿದೆ. ಪ್ರಾಥಮಿಕ ತನಿಖೆ ನಡೆಸಿ ಶರೀಫ್ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.