ಕರ್ನಾಟಕ

karnataka

ETV Bharat / state

ಮಂಗಳೂರು ವಿವಿ ಪದವಿ ಪರೀಕ್ಷೆ ಪ್ರಾರಂಭ: ಕೇರಳ ವಿದ್ಯಾರ್ಥಿಗಳಿಗೆ ಮಾತ್ರ ‌ವಿಶೇಷ ಪರೀಕ್ಷೆ - Mangalore university Degree Examination

ಮಂಗಳೂರು ವಿಶ್ವವಿದ್ಯಾಲಯದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳು ಇಂದಿನಿಂದ ನಡೆಯುತ್ತಿದ್ದು, ಪರೀಕ್ಷೆಗಳಿಗೆ ಹಾಜರಾಗಲು ಸಾಧ್ಯವಾಗದ ಕೇರಳದ ವಿದ್ಯಾರ್ಥಿಗಳಿಗೆ ವಿಶೇಷ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ.

Mangalore university
ಮಂಗಳೂರು ವಿವಿಯಲ್ಲಿ ಇಂದಿನಿಂದ ಪದವಿ ಪರೀಕ್ಷೆ ಪ್ರಾರಂಭ

By

Published : Aug 2, 2021, 11:48 AM IST

ಮಂಗಳೂರು: ಕೊರೊನಾ ಸೋಂಕಿನಿಂದಾಗಿ ಮುಂದೂಡಲಾಗಿದ್ದ ಮಂಗಳೂರು ವಿವಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳು ಇಂದಿನಿಂದ ಆರಂಭವಾಗಿದೆ.

ಕೇರಳದಲ್ಲಿ ಕೋವಿಡ್​ ಸೋಂಕು ಹೆಚ್ಚಳಗೊಂಡ ಹಿನ್ನೆಲೆಯಲ್ಲಿ ಕೇರಳ-ಮಂಗಳೂರು ನಡುವೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಹಾಗಾಗಿ, ಪರೀಕ್ಷೆ ಬರೆಯಲಾಗದ ಕಾಸರಗೋಡಿನ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ವಿಶೇಷ ಪರೀಕ್ಷೆ ನಡೆಸಲಾಗುತ್ತದೆ.

ಮಂಗಳೂರು ವಿವಿಯಲ್ಲಿ ಇಂದಿನಿಂದ ಪದವಿ ಪರೀಕ್ಷೆ ಪ್ರಾರಂಭ

ಇನ್ನು ಪರೀಕ್ಷೆ ಬರೆಯಲು ಸ್ವಂತ ವಾಹನಗಳಲ್ಲಿ ಬರುವ ಕೇರಳದ ವಿದ್ಯಾರ್ಥಿಗಳಿಗೆ ಗಡಿ ಭಾಗದಲ್ಲಿ ಪರೀಕ್ಷಾ ಪ್ರವೇಶ ಪತ್ರಿಕೆ ತೋರಿಸಿದ್ರೆ ದ.ಕ ಜಿಲ್ಲೆಯ ಗಡಿ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತದೆ. ಆದರೆ ಪರೀಕ್ಷೆ ಬರೆಯಲಾಗದ ವಿದ್ಯಾರ್ಥಿಗಳಿಗೆ ವಿವಿ ವಿಶೇಷ ಪರೀಕ್ಷೆ ನಡೆಸುವ ಭರವಸೆ ನೀಡಿದೆ.

ಇಂದಿನಿಂದ ಆಗಸ್ಟ್ 17 ರವರೆಗೆ ಪದವಿ ಪರೀಕ್ಷೆ ನಡೆಯುತ್ತಿದ್ದು, ಕೊರೊನಾ ನಿಯಮ ಪಾಲನೆ ಮಾಡಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.

ABOUT THE AUTHOR

...view details