ಮಂಗಳೂರು:ಕೆಎಸ್ಆರ್ಟಿಸಿ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆ ಮಂಗಳೂರು ವಿಶ್ವವಿದ್ಯಾಲಯದ ಏ.10ವರೆಗೆ ನಡೆಯಬೇಕಿದ್ದ ಪದವಿ ಪರೀಕ್ಷೆಯನ್ನು ಮುಂದೂಡಲಾಗಿದೆ.
ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳು ಏ.1ರಿಂದ ಆರಂಭವಾಗಿತ್ತು. ಬಸ್ ಮುಷ್ಕರದ ಹಿನ್ನೆಲೆ ಇಂದು ನಡೆಯಬೇಕಿದ್ದ ಪದವಿ ಪರೀಕ್ಷೆ ಮುಂದೂಡಲಾಗಿತ್ತು. ಇದೀಗ ಏ.8 ರಿಂದ ಏ.10ರವರೆಗೆ ನಡೆಯುವ ಎಲ್ಲ ಪದವಿ ಪರೀಕ್ಷೆಗಳನ್ನು ಮುಂದೂಡಿ ಆದೇಶಿಸಲಾಗಿದೆ.