ಕರ್ನಾಟಕ

karnataka

ETV Bharat / state

ಮಂಗಳೂರು ವಿವಿ ಕಂಟೋನ್ಮೆಂಟ್ ಝೋನ್: ಸ್ನಾತಕೋತ್ತರ ತರಗತಿಗಳು ರದ್ದು

ಮಂಗಳೂರು ವಿವಿ ಕಂಟೋನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ. ವಿಶ್ವವಿದ್ಯಾನಿಲಯದ ಕೆಲವು ವಿದ್ಯಾರ್ಥಿಗಳಲ್ಲಿ ಕೊರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ನಾತಕೋತ್ತರ ತರಗತಿಗಳನ್ನು ರದ್ದು ಮಾಡಲಾಗಿದೆ.

Mangalore University
ಮಂಗಳೂರು ವಿವಿ

By

Published : Mar 25, 2021, 2:07 PM IST

ಮಂಗಳೂರು:ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಲ್ಲಿ ಕೊರೊನಾ ಪ್ರಕರಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ನಾತಕೋತ್ತರ ತರಗತಿಗಳನ್ನು ರದ್ದು ಮಾಡಲಾಗಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ಕೆಲವು ವಿದ್ಯಾರ್ಥಿಗಳಲ್ಲಿ ಕೊರೊನಾ ಕಾಣಿಸಿಕೊಂಡಿತ್ತು. ಇದರಿಂದ ಇನ್ನಷ್ಟು ವಿದ್ಯಾರ್ಥಿಗಳಲ್ಲಿ ಕೊರೊನಾ ಹರಡದಂತೆ ತಡೆಯಲು ಒಂದು ವಾರಗಳ ಕಾಲ‌ ಸ್ನಾತಕೋತ್ತರ ತರಗತಿಗಳನ್ನು ರದ್ದುಗೊಳಿಸಲಾಗಿದೆ.

ಈ ಬಗ್ಗೆ 'ಈಟಿವಿ ಭಾರತ'ದೊಂದಿಗೆ ಮಾತನಾಡಿರುವ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಸುಬ್ರಹ್ಮಣ್ಯ ಯಡಪಡಿತ್ತಾಯ ಅವರು, ವಿದ್ಯಾರ್ಥಿಗಳಲ್ಲಿ ಕೊರೊನಾ ಪ್ರಕರಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ ತರಗತಿಗಳನ್ನು ರದ್ದುಗೊಳಿಸಲಾಗಿದೆ. ವಿಶ್ವವಿದ್ಯಾಲಯ ಕಂಟೋನ್ಮೆಂಟ್ ಝೋನ್ ಮಾಡಲಾಗಿದ್ದು, ವಿದ್ಯಾರ್ಥಿಗಳಿಗೆ ಹಾಸ್ಟೆಲ್ನಲ್ಲೇ ಇರುವಂತೆ ವ್ಯವಸ್ಥೆ ಮಾಡಲಾಗಿದೆ. ಅವರ ಆರ್​ಟಿಪಿಸಿಆರ್ ತಪಾಸಣೆಯನ್ನು ಆರೋಗ್ಯ ಇಲಾಖೆ ನಡೆಸುತ್ತಿದೆ ಎಂದು ಮಾಹಿತಿ ನೀಡಿದರು.

ABOUT THE AUTHOR

...view details