ಮಂಗಳೂರು:ನಗರದಹೊರವಲಯದಲ್ಲಿ ನಡೆದಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಗಾಯಾಳು ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಚೇತರಿಸಿಕೊಳ್ಳುತ್ತಿದ್ದು, ಐಸಿಯುವಿನಿಂದ ಸ್ಪೆಷಲ್ ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಾಯಾಳು ಪುರುಷೋತ್ತಮ ಆರೋಗ್ಯ ಸುಧಾರಿಸಿದೆ. ಕೆಲವೇ ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡುವುದಾಗಿ ವೈದ್ಯರು ಹೇಳಿದ್ದಾರೆ. ಇದೇ ವೇಳೆ, ಆರೋಪಿ ಶಾರೀಕ್ ವೆಂಟಿಲೇಟರ್ನಲ್ಲಿದ್ದ ಕಾರಣ ಆತನನ್ನು ವಿಚಾರಣೆ ನಡೆಸಲು ಸಾಧ್ಯವಾಗಿರಲಿಲ್ಲ. ನಿನ್ನೆ ವೈದ್ಯರು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಆತನನ್ನು ಕೆಲ ಹೊತ್ತುಗಳ ಕಾಲ ವಿಚಾರಣೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.