ಕರ್ನಾಟಕ

karnataka

ETV Bharat / state

ಲೋಕಾಯುಕ್ತ ದಾಳಿ ವೇಳೆ ಸಿಕ್ಕಿಬಿದ್ದ ಅಧಿಕಾರಿಗೆ 1 ಕೋಟಿ ದಂಡ ವಿಧಿಸಿದ ಕೋರ್ಟ್​ - ಈಟಿವಿ ಭಾರತ ಕನ್ನಡ

ಮನಪಾ ಅಧಿಕಾರಿಯು ಆದಾಯಕ್ಕಿಂತ ಅಧಿಕ ಪ್ರಮಾಣದ ಆಸ್ತಿ ಹೊಂದಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದರು. ಈ ಬಗ್ಗೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ಅಧಿಕಾರಿಗೆ ಶಿಕ್ಷೆ ಪ್ರಕಟಿಸಿದೆ.

mangaluru-court-fined-officer-in-lokayukta-raid-case
ಲೋಕಾಯುಕ್ತ ದಾಳಿ ವೇಳೆ ಸಿಕ್ಕಿಬಿದ್ದ ಅಧಿಕಾರಿಗೆ 1 ಕೋಟಿ ದಂಡ ವಿಧಿಸಿದ ಕೋರ್ಟ್​

By

Published : Oct 14, 2022, 7:59 PM IST

ಮಂಗಳೂರು: 2013ರಲ್ಲಿ ಲೋಕಾಯುಕ್ತ ದಾಳಿ ವೇಳೆ ಸಿಕ್ಕಿಬಿದ್ದ ಅಧಿಕಾರಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಒಂದು ಕೋಟಿ ರೂಪಾಯಿ ದಂಡ ವಿಧಿಸಿದೆ.

ಆದಾಯಕ್ಕಿಂತ ಅಧಿಕ ಪ್ರಮಾಣದ ಆಸ್ತಿ ಹೊಂದಿರುವ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಮಂಗಳೂರು ಮನಪಾ ಹಿರಿಯ ನೈರ್ಮಲ್ಯ ನಿರೀಕ್ಷಕ ಶಿವಲಿಂಗ ಕೊಂಡಗುಳಿ ಅವರಿಗೆ ನ್ಯಾಯಾಲಯವು 4 ವರ್ಷಗಳ ಸಾದಾ ಸಜೆ ಹಾಗೂ 1 ಕೋಟಿ ರೂ. ದಂಡ ವಿಧಿಸಿ ಆದೇಶಿಸಿದೆ.

ಆರೋಪಿ ಶಿವಲಿಂಗ ಕೊಂಡಗುಳಿ ಆದಾಯಕ್ಕಿಂತ ಅಧಿಕ ಪ್ರಮಾಣದ ಆಸ್ತಿ ಹೊಂದಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು 2013ರ ಫೆಬ್ರವರಿ 15ರಂದು ದಾಳಿ ನಡೆಸಿ ಬಂಧಿಸಿದ್ದರು. ಈ ಬಗ್ಗೆ ಲಂಚ ವಿರೋಧಿ ಕಾಯ್ದೆ 1988ರ ಅನ್ವಯ ಪ್ರಕರಣ ದಾಖಲಿಸಲಾಗಿತ್ತು. ಅಂದಿನ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಉಮೇಶ್ ಜಿ. ಶೇಟ್ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆಯನ್ನು 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ನಡೆಸಿದ್ದು, ಶಿವಲಿಂಗ ಕೊಂಡಗುಳಿ ಮೇಲಿನ ಆರೋಪ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಬಿ.ಬಿ.ಜಕಾತಿ ಅವರು ಆರೋಪಿಗೆ ನಾಲ್ಕು ವರ್ಷಗಳ ಸಾದಾ ಸಜೆ ಹಾಗೂ 1 ಕೋಟಿ ರೂ. ದಂಡ ವಿಧಿಸಿದ್ದಾರೆ. ಆರೋಪಿ ದಂಡ ತೆರಲು ವಿಫಲನಾದಲ್ಲಿ ಮತ್ತೆ ಒಂದು ವರ್ಷ ಸಾದಾ ಸಜೆ ಅನುಭವಿಸಬೇಕೆಂದು ಆದೇಶಿಸಲಾಗಿದೆ.

ಸರ್ಕಾರದ ಪರವಾಗಿ ಕರ್ನಾಟಕ ಲೋಕಾಯುಕ್ತ ವಿಶೇಷ ಸಾರ್ವಜನಿಕ ಅಭಿಯೋಜಕರಾದ ರವೀಂದ್ರ ಮುನ್ನಿಪಾಡಿ ವಾದಿಸಿದ್ದಾರೆ‌.

ಇದನ್ನೂ ಓದಿ:ಎಸಿಬಿಯಿಂದ ಲೋಕಾಯುಕ್ತಕ್ಕೆ 352 ಪ್ರಕರಣ ಹಸ್ತಾಂತರ

ABOUT THE AUTHOR

...view details