ಕರ್ನಾಟಕ

karnataka

ETV Bharat / state

ಕೊರೊನಾ ಲಸಿಕೆ ನೀಡುವಾಗ ಜಾಗರೂಕತೆ ಅಗತ್ಯ: ದ.ಕ ಜಿಲ್ಲಾಧಿಕಾರಿ - Mangaluru latest News

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಲಸಿಕಾ ಕಾರ್ಯಕ್ರಮ ಜ.16 ರಿಂದ ಅಧಿಕೃತವಾಗಿ ಆರಂಭವಾಗಲಿದ್ದು, ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚನೆ ನೀಡಿದ್ದಾರೆ.

Mangaluru DC
ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

By

Published : Jan 15, 2021, 7:23 AM IST

ಮಂಗಳೂರು:ದ.ಕ.ಜಿಲ್ಲೆಯಲ್ಲಿ ಕೊರೊನಾ ಲಸಿಕಾ ಕಾರ್ಯಕ್ರಮ ಜ.16 ರಿಂದ ಅಧಿಕೃತವಾಗಿ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ‌ ಲಸಿಕಾ ಕೇಂದ್ರದಲ್ಲಿ ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ನಡೆದ ಕೊರೊನಾ ಲಸಿಕಾ ಶಿಬಿರದ ಪೂರ್ವ ಸಿದ್ಧತೆಯ ಕುರಿತು ನಡೆಸಿರುವ ಸಭೆಯಲ್ಲಿ ಮಾತನಾಡಿ, ದ.ಕ. ಜಿಲ್ಲೆಯ 6 ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡುವ ಪ್ರಕ್ರಿಯೆ ಪ್ರಾರಂಭವಾಗುತ್ತಿದೆ. ಈವರೆಗೆ ಲಸಿಕೆ ಪಡೆದುಕೊಂಡ ಯಾರಿಗೂ ಅಡ್ಡ ಪರಿಣಾಮವಾದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆದರೂ ಲಸಿಕೆ ಪಡೆಯುವ ಎಲ್ಲರನ್ನು ವೀಕ್ಷಣೆಯಲ್ಲಿಟ್ಟು ಅಡ್ಡ ಪರಿಣಾಮದ ಕುರಿತು ಖಾತರಿ ಪಡಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.

ಲಸಿಕೆ ನೀಡುವ ಮುನ್ನ ಫಲಾನುಭವಿಗಳನ್ನು ವೈದ್ಯಕೀಯ ತಪಾಸಣೆ ನಡೆಸಿ, 18 ವರ್ಷಕ್ಕಿಂತ ಮೇಲ್ಪಟ್ಟವರನ್ನು ಅತ್ಯಂತ ಸೂಕ್ಷ್ಮವಾಗಿ ತಪಾಸಣೆ ನಡೆಸಬೇಕು. ಫಲಾನುಭವಿಗಳಿಗೆ ಯಾವುದೇ ರೀತಿಯ ಗೊಂದಲ ಉಂಟಾಗದಂತೆ ಜಾಗರೂಕತೆ ವಹಿಸಬೇಕು‌. ಅಲ್ಲದೇ ಲಸಿಕಾ ಕೇಂದ್ರದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಮಾಸ್ಕ್, ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನಿಂಗ್ ಸಮರ್ಪಕವಾಗಿ ಬಳಕೆಯಾಗುವಂತೆ ನಿಗಾ ವಹಿಸಬೇಕು. ಇನ್ನಿತರ ಅಗತ್ಯ ವೈದ್ಯಕೀಯ ಉಪಕರಣಗಳು ಲಭ್ಯವಿರಬೇಕು. ಅದರ ಜೊತೆಗೆ ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಲಸಿಕೆ ಪಡೆದ ವ್ಯಕ್ತಿಗೆ ಯಾವುದೇ ತೊಂದರೆ ಕಂಡು ಬಂದಲ್ಲಿ ಸೂಕ್ತ ತಪಾಸಣೆ ನಡೆಸಿ ತುರ್ತು ಚಿಕಿತ್ಸೆ ನೀಡಲು ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.

ABOUT THE AUTHOR

...view details