ಮಂಗಳೂರು: ನಗರದ ಹೊರವಲಯದಲ್ಲಿರುವ ಗಂಜಿಮಠ ಬಳಿಯ ಮಳಲಿ ಮಸೀದಿ ವಿವಾದ ಪ್ರಕರಣದಲ್ಲಿ ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದಿಂದ ಇಂದು ತೀರ್ಪು ಹೊರ ಬರುವ ಸಾಧ್ಯತೆ ದಟ್ಟವಾಗಿದೆ.
ಮಳಲಿ ಮಸೀದಿ ನವೀಕರಣದ ವೇಳೆ ಹಿಂದೂ ದೇವಾಲಯ ಶೈಲಿಯ ಪಾರಂಪರಿಕ ಕಟ್ಟಡ ಪತ್ತೆಯಾಗಿತ್ತು. ಆ ಬಳಿಕ ಹಿಂದೂ ಸಂಘಟನೆಗಳು ಮಳಲಿ ಭಜನಾ ಮಂದಿರದಲ್ಲಿ ತಾಂಬೂಲ ಪ್ರಶ್ನೆ ಇಟ್ಟಿತ್ತು. ಈ ತಾಂಬೂಲ ಪ್ರಶ್ನೆಯಲ್ಲಿ ಆ ಜಾಗದಲ್ಲಿ ಹಿಂದೆ ಶಿವನಿಗೆ ಸಂಬಂಧಿಸಿದ ಗುರು ಪೀಠವಿತ್ತು ಎಂಬ ಅಂಶ ಉಲ್ಲೇಖವಾಗಿತ್ತು. ಈ ಹಿನ್ನೆಲೆಯಲ್ಲಿ ಮಸೀದಿ ಇರುವ ಸ್ಥಳದ ಬಗ್ಗೆ ವಿಹೆಚ್ಪಿ ಸರ್ವೇಗೆ ನ್ಯಾಯಾಲಯಕ್ಕೆ ಅರ್ಜಿ ಹಾಕಿತ್ತು.