ಮಂಗಳೂರು: ಕ್ರಿಕೆಟ್ ಬೆಟ್ಟಿಂಗ್ ನಡೆಸದಂತೆ ಮಂಗಳೂರು ಪೊಲೀಸ್ ಕಮೀಷನರ್ ಸಂದೀಪ್ ಪಾಟೀಲ್ ಮತ್ತೊಮ್ಮೆ ಟ್ವೀಟ್ ಮೂಲಕ ಎಚ್ಚರಿಕೆ ನೀಡಿದ್ದಾರೆ.
ಐಪಿಎಲ್ ಬೆಟ್ಟಿಂಗ್: ಆರ್‌ಸಿಬಿ ಟ್ವೀಟ್‌ಗೆ ರಿಟ್ವೀಟ್ ಮಾಡಿ ಕಮೀಷನರ್ ಎಚ್ಚರಿಕೆ - etv bharat
ನಿನ್ನೆ ಆರ್‌ಸಿಬಿ ತಂಡ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆದ ಐಪಿಎಲ್ ಪಂದ್ಯದ ಬಗ್ಗೆ ಆರ್‌ಸಿಬಿ ತಂಡ ಟ್ವೀಟ್ ಮಾಡಿತ್ತು. ಈ ಟ್ವೀಟ್‌ಗೆ ರಿಟ್ವೀಟ್ ಮಾಡಿರುವ ಮಂಗಳೂರು ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್, ಬೆಟ್ಟಿಂಗ್ ದಂಧೆಕೋರರಿಗೆ ಎಚ್ಚರಿಕೆ ನೀಡಿದ್ದಾರೆ.
ಐಪಿಎಲ್ ಮ್ಯಾಚ್ ಬಗ್ಗೆ ಆರ್‌ಸಿಬಿ (ರಾಯಲ್ ಚಾಲೆಂಜರ್ಸ್ ಬೆಂಗಳೂರು) ಹಾಕಿದ ಟ್ವೀಟ್‌ಗೆ ಮಂಗಳೂರು ಕಮಿಷನರ್ ಸಂದೀಪ್ ಪಾಟೀಲ್ ರಿಟ್ವೀಟ್ ಮಾಡಿ ಬೆಟ್ಟಿಂಗ್‌ದಾರರಿಗೆ ಮತ್ತೊಮ್ಮೆ ಎಚ್ಚರಿಸಿದ್ದಾರೆ.
ಐಪಿಎಲ್ ಟೂರ್ನಿ ಆರಂಭಕ್ಕೆ ಮುನ್ನ ಟ್ವೀಟ್ ಮೂಲಕ ಎಚ್ಚರಿಕೆ ನೀಡಿದ್ದ ಅವರು, ಆನ್ಲೈನ್ ಬೆಟ್ಟಿಂಗ್ನಲ್ಲಿ ನಿರತರಾಗಿದ್ದ ಮೂವರನ್ನು ಬಂಧಿಸಿದ್ದರು. ಇನ್ನು ನಿನ್ನೆ ಆರ್‌ಸಿಬಿ ತಂಡ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆದ ಐಪಿಎಲ್ ಪಂದ್ಯದ ಬಗ್ಗೆ ಆರ್‌ಸಿಬಿ ತಂಡ ಟ್ವೀಟ್ ಮಾಡಿತ್ತು. ಈ ಟ್ವೀಟ್‌ಗೆ ರಿಟ್ವೀಟ್ ಮಾಡಿರುವ ಮಂಗಳೂರು ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್, ಪಂದ್ಯಕ್ಕೆ ಎಲ್ಲರೂ ಸಿದ್ಧರಾಗಿರಿ. ಅದರಂತೆ ಮಂಗಳೂರು ಪೊಲೀಸರು ಕೂಡ ಕ್ರಿಕೆಟ್ ಬೆಟ್ಟಿಂಗ್ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಎಚ್ಚರಿಸಿದ್ದರು.