ಮಂಗಳೂರು:ಕೇರಳ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ಕಟ್ಟೆಚ್ಚರ ವಹಿಸುವ ಹಿನ್ನೆಲೆಯಲ್ಲಿ ಸೋಮವಾರದಿಂದ ನಡೆಯುತ್ತಿರುವ ಮಂಗಳೂರು ವಿವಿ ಪದವಿ ಪರೀಕ್ಷೆಗಳನ್ನು ತಕ್ಷಣ ಮುಂದೂಡುವಂತೆ ವಿವಿಯ ಮೌಲ್ಯಮಾಪನದ ರಿಜಿಸ್ಟ್ರಾರ್‌ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ ನೀಡಿದ್ದಾರೆ.
ಮಂಗಳೂರು ವಿವಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಭ್ಯಾಸಕ್ಕಾಗಿ ಕೇರಳದ ಕಾಸರಗೋಡಿನಿಂದ ವಿದ್ಯಾರ್ಥಿಗಳು ಆಗಮಿಸುತ್ತಿದ್ದಾರೆ. ಕಾಸರಗೋಡಿನಿಂದ ಜಿಲ್ಲೆಗೆ ಪ್ರಯಾಣಿಕರ ಓಡಾಟದಿಂದ ವ್ಯಕ್ತಿಯಿಂದ ವ್ಯಕ್ತಿಗೆ ಸೋಂಕು ಹರಡುವ ಸಾಧ್ಯತೆ ಇದೆ. ಆದ್ದರಿಂದ ಸಂಭಾವ್ಯ ಅಪಾಯ ತಪ್ಪಿಸಲು ಗಡಿಭಾಗದಲ್ಲಿ ತೀವ್ರ ಕಟ್ಟೆಚ್ಚರ ವಹಿಸಬೇಕು ಎಂದು ಸರಕಾರ ಸೂಚಿಸಿದ್ದು, ಆದೇಶ ಯಥಾವತ್ ಪಾಲಿಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.