ಮಂಗಳೂರು: ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟಲು ದ.ಕ.ಜಿಲ್ಲೆಯಲ್ಲಿ ಜಾರಿಗೊಳಿಸಿರುವ ಲಾಕ್ಡೌನ್ 5ನೇ ದಿನಕ್ಕೆ ಕಾಲಿಟ್ಟಿದ್ದು, ವಾಹನ ಸಂಚಾರಕ್ಕೆ ಮಾತ್ರ ಇನ್ನೂ ಬ್ರೇಕ್ ಬಿದ್ದಿಲ್ಲ.
ಲಾಕ್ಡೌನ್ ಸಡಿಲಿಕೆ: ಮಂಗಳೂರಿನಲ್ಲಿ ಖಾಸಗಿ ವಾಹನಗಳ ತಿರುಗಾಟಕ್ಕಿಲ್ಲ ಬ್ರೇಕ್
ಮಂಗಳೂರಿನಲ್ಲಿ ಜಾರಿಗೊಳಿಸಲಾದ ಲಾಕ್ಡೌನ್ ಕೊಂಚ ಸಡಿಲಿಕೆ ಮಾಡಲಾಗಿದ್ದು, ವಾಹನ ಸವಾರರು ಅನಗತ್ಯ ಸಂಚಾರ ಮಾಡುತ್ತಿದ್ದಾರೆ. ಹೀಗಾಗಿ, ನಗರದಲ್ಲಿ ಕೊರೊನಾ ಆತಂಕ ಹೆಚ್ಚಾಗಿದೆ.
ಖಾಲಿ ಇರುವ ರಸ್ತೆ
ಬೆಳಗ್ಗೆ 8 ರಿಂದ 11ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಲಾಕ್ಡೌನ್ ಅನ್ನು ಕೊಂಚ ಸಡಿಲಿಕೆ ಮಾಡಲಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಅನೇಕರು ದ್ವಿಚಕ್ರ ವಾಹನ, ಕಾರುಗಳಲ್ಲಿ ಅನಗತ್ಯ ಸಂಚಾರ ಮಾಡುತ್ತಿರುವ ದೃಶ್ಯ ಕಂಡು ಬರುತ್ತಿದೆ. ಇದರಿಂದಾಗಿ, ಕೊರೊನಾ ವೈರಸ್ ಹೆಚ್ಚಾಗುವ ಆತಂಕ ಎದುರಾಗಿದೆ.
11ರ ಬಳಿಕ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸರು ಬ್ಯಾರಿಕೇಡ್ಗಳನ್ನು ಹಾಕಿ ನಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಿತ್ತಿದ್ದು, ಆ ಬಳಿಕ ಸಂಚರಿಸುತ್ತಿರುವ ವಾಹನ ಸವಾರರನ್ನು ವಾಪಸ್ ಕಳುಹಿಸಲಾಗುತ್ತಿದೆ.