ಸುಳ್ಯ(ದಕ್ಷಿಣ ಕನ್ನಡ):ಸುಳ್ಯ ಹಾಗು ಪುತ್ತೂರು ಅಬಕಾರಿ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ತಾಲೂಕಿನ ಖಾಸಗಿ ಹಾಸ್ಟೆಲ್ ಒಂದರಲ್ಲಿ ಬಾಡಿಗೆದಾರರೊಬ್ಬರು ತಮ್ಮ ಕೊಠಡಿಯಲ್ಲಿ ಸಂಗ್ರಹಿಸಿಟ್ಟಿದ್ದ 11.5 ಕೆಜಿ ಗಾಂಜಾವನ್ನು ವಶಪಡಿಸಿಕೊಂಡ ಘಟನೆ ಬೆಳಕಿಗೆ ಬಂದಿದೆ.
ಹಾಸ್ಟೆಲ್‌ನ ಕೊಠಡಿಯೊಂದನ್ನು ಬಾಡಿಗೆಗೆ ಪಡೆದ ಪಲ್ಲತ್ತೂರಿನ ಮೊಯ್ದಿನ್ ಕುಂಞಿ ಎಂಬವರು ತನ್ನ ಕುಟುಂಬದೊಂದಿಗೆ ಇಲ್ಲಿ ವಾಸವಾಗಿದ್ದು, ಇಲ್ಲಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡುತ್ತಿರುವ ಕುರಿತು ಮಾಹಿತಿ ಪಡೆದ ಸುಳ್ಯ ಹಾಗೂ ಪುತ್ತೂರಿನ ಅಬಕಾರಿ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.