ಕರ್ನಾಟಕ

karnataka

ETV Bharat / state

ಅಕ್ರಮ ಗಾಂಜಾ ಮಾರಾಟ: ನಾಲ್ವರು ಆರೋಪಿಗಳ ಬಂಧನ! - ಅಕ್ರಮವಾಗಿ ಗಾಂಜಾ ಮಾರಾಟ

ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Marijuana Seized
Marijuana Seized

By

Published : Jan 22, 2021, 4:40 AM IST

ಉಳ್ಳಾಲ:ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ತಂಡವನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಕೊಣಾಜೆ ಮತ್ತು ಉಳ್ಳಾಲ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ.

ನರಿಂಗಾನದ ತೌಡುಗೋಳಿ ಕ್ರಾಸ್ ನಿವಾಸಿ ಅಬ್ದುಲ್ ಅಝೀಝ್ ಯಾನೆ ಪೋಕರ್ ಅಝೀಝ್ (40) ಮತ್ತು ಹಫೀಝ್ ಯಾನೆ ಅಪ್ಪಿ ಯಾನೆ ಮೊಯ್ದೀನ್ (34)ಕುತ್ತಾರಿನ ದೆಕ್ಕಾಡು ಇಬ್ಬರು ಬಂಧಿತ ಆರೋಪಿಗಳು.

23.980 ಗ್ರಾಂ ಗಾಂಜಾ ಇಟ್ಟುಕೊಂಡು ಮಾರಾಟಕ್ಕೆ ಯತ್ನಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ತಂಡ ವಶಕ್ಕೆ ಪಡೆದುಕೊಂಡು ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ತೆಲಂಗಾಣ ಮೂಲದ ವಿಠಲ್ ಚೌಹಾನ್ ಮತ್ತು ಬೀದರ್ ನಿವಾಸಿಗಳಾದ ಸಂಜೀವ್ ಕುಮಾರ್, ಕಲ್ಲಪ್ಪ ಎಂಬವರನ್ನು ದೇರಳಕಟ್ಟೆಯಿಂದ ಮುಡಿಪು ಕಡೆಗೆ ಗಾಂಜಾ ಸಾಗಾಟ ಮಾಡ್ತಿದ್ದ ವೇಳೆ ವಶಕ್ಕೆ ಪಡೆದುಕೊಳ್ಳಲಾಗಿದೆ. ಇವರಿಂದ ಸುಮಾರು 15 ಕೆ.ಜಿ ಗಾಂಜಾ ಹಾಗೂ ಸಾಗಾಟಕ್ಕೆ ಬಳಸಲಾದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಉಳ್ಳಾಲ ಮತ್ತು ಕೊಣಾಜೆ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ABOUT THE AUTHOR

...view details