ಮಂಗಳೂರು: ವಿವಾಹೇತರ ಸಂಬಂಧ ಹೊಂದಿದ್ದ ವಿವಾಹಿತ ಮಹಿಳೆಯೊಬ್ಬರು ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ರಾತ್ರಿ ನಡೆದಿದೆ. ಉಳ್ಳಾಲದ 37 ವರ್ಷದ ವಿವಾಹಿತೆ ಸಾವಿಗೆ ಶರಣಾಗಿದ್ದಾರೆ.
ವಿವಾಹೇತರ ಸಂಬಂಧ ಹೊಂದಿದ್ದ ಮಹಿಳೆ ಲಾಡ್ಜ್ನಲ್ಲಿ ಆತ್ಮಹತ್ಯೆ - ಮಂಗಳೂರಿನಲ್ಲಿ ವಿವಾಹಿತ ಮಹಿಳೆ ಆತ್ಮಹತ್ಯೆ
ವಿವಾಹೇತರ ಸಂಬಂಧ ಹೊಂದಿದ್ದ ವಿವಾಹಿತ ಮಹಿಳೆ ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ವಿವಾಹೇತರ ಸಂಬಂಧ ಹೊಂದಿದ್ದ ಮಹಿಳೆ ಲಾಡ್ಜ್ನಲ್ಲಿ ಆತ್ಮಹತ್ಯೆ
ಮೃತ ಮಹಿಳೆ ಉಳ್ಳಾಲದ ವ್ಯಕ್ತಿಯೊಬ್ಬರ ಜೊತೆ ವಿವಾಹೇತರ ಸಂಬಂಧ ಹೊಂದಿದ್ದರು. ಇಬ್ಬರೂ ನಗರದ ಲಾಡ್ಜ್ವೊಂದರಲ್ಲಿ ತಂಗಿದ್ದು, ವ್ಯಕ್ತಿ ಹೊರಗೆ ಹೋಗಿದ್ದ ಸಂದರ್ಭ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಂದರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.