ಬೆಳ್ತಂಗಡಿ:ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾ ಭವನದಲ್ಲಿ ನಿನ್ನೆ ಸಂಜೆ (ಬುಧವಾರ) ಸಂಜೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಿತು. ಸಮಾರಂಭದಲ್ಲಿ 201 ಜೋಡಿ ವಧು-ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಇದಕ್ಕೂ ಮುನ್ನ, ಭವ್ಯ ಮೆರವಣಿಗೆಯಲ್ಲಿ ನೂತನ ವಧು-ವರರು ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ಅಮೃತವರ್ಷಿಣಿ ಸಭಾಭವನಕ್ಕೆ ಆಗಮಿಸಿದರು. ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಹೇಮಾವತಿ ಹೆಗ್ಗಡೆ, ನಟ ದರ್ಶನ್ ತೂಗುದೀಪ, ಡಿ.ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್ ಮತ್ತು ಗಣ್ಯ ಅತಿಥಿಗಳು ನವ ಜೋಡಿಗಳಿಗೆ ಮಂಗಳಸೂತ್ರ ವಿತರಿಸಿದರು. ವೇದ, ಮಂತ್ರ ಘೋಷ ಪಠಣದೊಂದಿಗೆ ವಧು-ವರರಿಗೆ ಮಂಗಳಸೂತ್ರ ಧಾರಣೆ ಮಾಡಿ, ಆಯಾ ಜಾತಿಯ ಸಂಪ್ರದಾಯದಂತೆ ಮದುವೆಯ ಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸಲಾಯಿತು. ಕೇರಳದಿಂದ 6, ಆಂಧ್ರ ಪ್ರದೇಶದ ಇಬ್ಬರು ಸಾಮೂಹಿಕ ವಿವಾಹದಲ್ಲಿ ಮದುವೆಯಾದರು.