ಮಂಗಳೂರು:ಕೋವಿಡ್ ಸಂಕಷ್ಟ ಕಾಲದಲ್ಲಿ ಮಂಗಳೂರು ಮಹಾನಗರ ಪಾಲಿಕೆ (ಮನಪಾ) ವ್ಯಾಪ್ತಿಯಲ್ಲಿ ಸ್ವಯಂಘೋಷಿತ ಆಸ್ತಿ ತೆರಿಗೆ ಪಾವತಿಯಲ್ಲಿ ಶೇ.5ರಷ್ಟು ರಿಯಾಯಿತಿ ಇನ್ನಷ್ಟು ವಿಸ್ತರಿಸಿ ಆದೇಶಿಸುವಂತೆ ಮಂಗಳೂರು ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿ ರಾಜ್ಯ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರಿಗೆ ಪತ್ರ ಬರೆದು ವಿನಂತಿಸಿದ್ದಾರೆ.
ಮ.ನ.ಪಾ ಆಸ್ತಿ ತೆರಿಗೆ ಪಾವತಿ ವಿನಾಯಿತಿ ಇನ್ನಷ್ಟು ವಿಸ್ತರಿಸುವಂತೆ ಸಚಿವರಿಗೆ ಪತ್ರ
ಮ.ನ.ಪಾ ಆಸ್ತಿ ತೆರಿಗೆ ಮೇಲೆ ನೀಡಲಾಗಿರುವ ಶೇ.5ರ ವಿನಾಯಿತಿಯನ್ನು ಇನ್ನಷ್ಟು ವಿಸ್ತರಿಸುವಂತೆ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಪತ್ರದ ಮೂಲಕ ಸಚಿವ ಭೈರತಿ ಬಸವರಾಜ್ ಅವರಿಗೆ ವಿನಂತಿ ಮಾಡಿದ್ದಾರೆ.
ಮೇಯರ್ ಪ್ರೇಮಾನಂದ ಶೆಟ್ಟಿ ಮತ್ತು ಸಚಿವ ಭೈರತಿ ಬಸವರಾಜ್
ಕೋವಿಡ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ 2021-22 ನೇ ಸಾಲಿಗೆ ಏಪ್ರಿಲ್ ತಿಂಗಳಲ್ಲಿ ಆಸ್ತಿ ತೆರಿಗೆ ಮೇಲೆ ನೀಡಲಾಗುತ್ತಿರುವ ಶೇ.5ರಷ್ಟು ರಿಯಾಯಿತಿಯನ್ನು 2021 ಜೂನ್ 30ರವರೆಗೆ ವಿಸ್ತರಿಸಿ ಆದೇಶಿಸಲಾಗಿತ್ತು. ಆದರೆ ದ.ಕ.ಜಿಲ್ಲೆಯಲ್ಲಿ ಲಾಕ್ಡೌನ್ ಅವಧಿ 2021 ಜೂನ್ 21ರವರೆಗೆ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಆಸ್ತಿ ತೆರಿಗೆ ಮೇಲೆ ನೀಡಲಾಗಿರುವ ಶೇ.5ರ ವಿನಾಯಿತಿಯನ್ನು ಇನ್ನಷ್ಟು ವಿಸ್ತರಿಸುವಂತೆ ಪ್ರೇಮಾನಂದ ಶೆಟ್ಟಿ ಸಚಿವರಲ್ಲಿ ವಿನಂತಿಸಿದ್ದಾರೆ.