ಮಂಗಳೂರು: ನಗರದ ವೆನ್ಲಾಕ್ ಜಿಲ್ಲಾಸ್ಪತ್ರೆಯ ಅಪಘಾತ ಚಿಕಿತ್ಸಾ ವಿಭಾಗದಲ್ಲಿ ತರಬೇತಿ ಪಡೆಯುತ್ತಿದ್ದ ಮೆಡಿಕಲ್ ವಿದ್ಯಾರ್ಥಿಯೋರ್ವ ರಾತ್ರಿ ಕರ್ತವ್ಯದಲ್ಲಿದ್ದ ವೇಳೆ ಗೇಮ್ ಆಡುತ್ತಿದ್ದ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು. ಈ ಸಂಬಂಧ ವಿದ್ಯಾರ್ಥಿಯನ್ನು ಅಮಾನತು ಮಾಡಿ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರು ಆದೇಶಿಸಿದ್ದಾರೆ.
ರೋಗಿಯನ್ನು ಕಡೆಗಣಿಸಿ ವಿಡಿಯೋ ಗೇಮ್ ಆಡುತ್ತಿದ್ದ ಮೆಡಿಕಲ್ ವಿದ್ಯಾರ್ಥಿ ಅಮಾನತು
ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ರೋಗಿಯೊಬ್ಬರನ್ನು ಚಿಕಿತ್ಸೆಗೆ ಕರೆತಂದಾಗ ಮೆಡಿಕಲ್ ವಿದ್ಯಾರ್ಥಿ ವಿಡಿಯೋ ಗೇಮ್ ಆಡುತ್ತಿದ್ದ ವಿಡಿಯೋ ವೈರಲ್ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಯನ್ನು ಅಮಾನತು ಮಾಡಿ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರು ಆದೇಶ ಹೊರಡಿಸಿದ್ದಾರೆ.
Medical student suspended
ಜ.23ರಂದು ರಾತ್ರಿ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ರೋಗಿಯನ್ನು ಕಡೆಗಣಿಸಿ ಕೆಎಂಸಿಯ ಸ್ನಾತಕೋತ್ತರ ವಿದ್ಯಾರ್ಥಿಯೋರ್ವ ವಿಡಿಯೋ ಗೇಮ್ ಆಡುತ್ತಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಕುರಿತು ತನಿಖೆ ನಡೆಸಿದಾಗ ವಿದ್ಯಾರ್ಥಿ ಗೇಮ್ ಆಡುತ್ತಿದ್ದದ್ದು ಸಾಬೀತಾದ ಹಿನ್ನೆಲೆ ಅವನನ್ನು ಅಮಾನತು ಮಾಡಿ ಆದೇಶಿಸಲಾಗಿದೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ