ಸುಬ್ರಹ್ಮಣ್ಯ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ಈ ಬಾರಿ ಚಂಪಾಷಷ್ಠಿಯನ್ನು ಯಾವ ರೀತಿಯಲ್ಲಿ ನಡೆಸಬಹುದು ಎಂಬ ಬಗ್ಗೆ ಚರ್ಚಿಸಲು ಶೀಘ್ರದಲ್ಲೇ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಮುಜರಾಯಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದರು.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೋವಿಡ್ 19 ಆತಂಕವಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮಗಳನ್ನು ಗಮನದಲ್ಲಿಟ್ಟುಕೊಂಡು, ನಿಯಮಗಳನ್ನು ಪಾಲಿಸಿವುದರೊಂದಿಗೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ನಡೆಸುವ ಬಗ್ಗೆ ಚರ್ಚಿಸಲಾಗುವುದು. ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಜಿಲ್ಲಾಧಿಕಾರಿಗಳ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಉಪಸ್ಥಿತಿಯಲ್ಲಿ ಈ ವಾರದ ಕೊನೆಯಲ್ಲಿ ಸಭೆ ನಡೆಯಲಿದೆ. ಎಲ್ಲಾ ಸಾಧಕ, ಬಾಧಕಗಳನ್ನು ಗಮದಲ್ಲಿಟ್ಟುಕೊಂಡು ಚಂಪಾಷಷ್ಠಿ ನಡೆಸಲು ಕ್ರಮಕೈಗೊಳ್ಳಲಾಗುವುದು ಎಂದರು.