ಮಂಗಳೂರು:ರಾಜ್ಯ ಸರಕಾರ ನಾಳೆ ರಾತ್ರಿಯಿಂದ 14 ದಿನ ಕೋವಿಡ್ ಕರ್ಫ್ಯೂ ಜಾರಿಗೊಳಿಸಿದ್ದು, ನಗರದಿಂದ ವಲಸೆ ಕಾರ್ಮಿಕರು ತಮ್ಮ ತಮ್ಮ ಊರಿಗೆ ಪ್ರಯಾಣ ಬೆಳೆಸಲು ಆರಂಭಿಸಿದ್ದಾರೆ. ಹೀಗಾಗಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಪೂರ್ತಿ ಜನ ಜಂಗುಳಿಯಿಂದ ತುಂಬಿದೆ.
ಕೊರೊನಾ ಕರ್ಫ್ಯೂ ಜಾರಿ: ಮಂಗಳೂರಿನಿಂದ ಪ್ರಯಾಣ ಬೆಳೆಸಿದ ವಲಸೆ ಕಾರ್ಮಿಕರು - ಮಂಗಳೂರು ತ್ಯಜಿಸಿದ ವಲಸೆ ಕಾರ್ಮಿಕರು
ರಾಜ್ಯದಲ್ಲಿ 14 ದಿನಗಳ ಕೋವಿಡ್ ಕರ್ಫ್ಯೂ ಘೋಷಣೆಯಾದ ಬೆನ್ನಲೇ ಮಂಗಳೂರಿನಲ್ಲಿ ನೆಲೆಸಿದ್ದ ರಾಜ್ಯದ ವಿವಿಧ ಜಿಲ್ಲೆಗಳ ವಲಸೆ ಕಾರ್ಮಿಕರು ತಮ್ಮ-ತಮ್ಮ ಊರುಗಳಿಗೆ ತೆರಳಲು ಬಸ್ ನಿಲ್ದಾಣಗಳಲ್ಲಿ ಜಮಾಯಿಸಿದ್ದಾರೆ.

migrant labours
ಮಂಗಳೂರಿನಿಂದ ಪ್ರಯಾಣ ಬೆಳೆಸಿದ ವಲಸೆ ಕಾರ್ಮಿಕರು
ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ವಲಸೆ ಕಾರ್ಮಿಕರು ಮಂಗಳೂರು ನಗರದಲ್ಲಿ ಬದುಕು ಕಟ್ಟಿಕೊಂಡಿದ್ದರು. ಆದರೆ, ಇದೀಗ ರಾಜ್ಯ ಸರ್ಕಾರ 14 ದಿನಗಳ ಲಾಕ್ಡೌನ್ ಘೋಷಣೆ ಮಾಡಿದ್ದು, ಎಲ್ಲರೂ ಸಾಮಾನು ಸರಂಜಾಮುಗಳೊಂದಿಗೆ ತಮ್ಮ ಊರುಗಳಿಗೆ ಪ್ರಯಾಣ ಬೆಳೆಸಿದ್ದಾರೆ. ಕರ್ಫ್ಯೂ ಹಿನ್ನೆಲೆ ಕೆಲಸಗಳಿಲ್ಲದಿರುವುದರಿಂದ ಎಲ್ಲರೂ ತಮ್ಮ ಊರುಗಳಿಗೆ ಪ್ರಯಾಣ ಬೆಳೆಸಿದ್ದಾರೆ. ರಾಯಚೂರು, ಕುಷ್ಟಗಿ, ಗದಗ, ಬಾದಾಮಿ, ಬಿಜಾಪುರ ಮುಂತಾದ ಕಡೆಗಳಿಗೆ ಹೊರಟಿರುವ ವಲಸಿಗ ಕಾರ್ಮಿಕರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಜಮಾಯಿಸಿದ್ದಾರೆ.
Last Updated : Apr 26, 2021, 6:19 PM IST