ಮಂಗಳೂರು:ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ (ಕೆಯುಐಡಿಎಫ್‌ಸಿ) ಚೀಫ್ ಇಂಜಿನಿಯರ್‌ಗೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ 'ಗೆಟ್ ಔಟ್' ಎಂದು ಸಭೆಯಿಂದ ಹೊರಕಳುಹಿಸಿದ ಘಟನೆ ನಡೆದಿದೆ.
ಮಂಗಳೂರು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ವಿದ್ಯಮಾನ ನಡೆಯಿತು. ಕೆಯುಐಡಿಎಫ್‌ಸಿ ಕಾಮಗಾರಿಗಳು ತೀವ್ರ ವಿಳಂಬಗತಿಯಲ್ಲಿ ನಡೆಯುತ್ತಿದೆ. ಶೇ.60ರಷ್ಟು ಕಾಮಗಾರಿ ನಡೆಸಲು 4 ವರ್ಷ ಹಿಡಿದಿದೆ. ಇನ್ನುಳಿದ ಶೇ.40ರಷ್ಟು ಕಾಮಗಾರಿ ಇನ್ನು ನಾಲ್ಕೈದು ತಿಂಗಳಲ್ಲಿ ಸಂಪೂರ್ಣಗೊಳಿಸಲು ಆಗುತ್ತಾ? ಎಂದು ಚೀಫ್ ಇಂಜಿನಿಯರ್ ಜಯರಾಮ್ ಅವರನ್ನು ಸಚಿವರು ಪ್ರಶ್ನಿಸಿ ತೀವ್ರ ತರಾಟೆಗೆ ತೆಗೆದುಕೊಂಡರು.