ಕರ್ನಾಟಕ

karnataka

ಮುಡಿಪು: ಗಣಿ ಚಟುವಟಿಕೆ ಪ್ರದೇಶಕ್ಕೆ ಸಚಿವ ಸಿ.ಸಿ.ಪಾಟೀಲ್ ಭೇಟಿ

By

Published : Jan 7, 2021, 7:21 AM IST

ಮುಡಿಪು ಗ್ರಾಮೀಣ ಪ್ರದೇಶವಾಗಿದ್ದು, ಈಗಾಗಲೇ ಈ ಪ್ರದೇಶದಲ್ಲಿ ಅಕ್ರಮ ಗಣಿಗಾರಿಗೆ ನಿಲ್ಲಿಸಲಾಗಿದೆ. ನೆಲಸಮತಟ್ಟು ಮಾಡಲು ಪರವಾನಗಿ ಪಡೆದುಕೊಂಡು ಅದಕ್ಕಿಂತ ವಿಸ್ತಾರವಾದ ಜಾಗದಲ್ಲಿ ಸಮತಟ್ಟು ಮಾಡಿ, ಮಣ್ಣು ಸಾಗಾಟ ಮಾಡಿದ ಆರೋಪ‌ ಕೇಳಿ ಬಂದಿದೆ.

ಸಚಿವ ಸಿ.ಸಿ.ಪಾಟೀಲ್
ಸಚಿವ ಸಿ.ಸಿ.ಪಾಟೀಲ್

ಕೊಣಾಜೆ(ಮಂಗಳೂರು): ಮುಡಿಪು ಸಮೀಪದ ಬಾಳೆಪುಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಂಡಿಕಟ್ಟ ಗಣಿಗಾರಿಕೆ ಚಟುವಟಿಕೆ ಪ್ರದೇಶಕ್ಕೆ ಕರ್ನಾಟಕ ಸರ್ಕಾರದ ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ. ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಚಿವರು ಗಣಿಗಾರಿಗೆ ಹಾಗೂ ಅಕ್ರಮ ಮಣ್ಣು ಸಾಗಣೆ ಆರೋಪ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕುಮಾರ್ ಅವರಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಗಣಿಗಾರಿಕೆ ಪ್ರದೇಶದ ಕುರಿತು ವಿವರಿಸಿದ ಜಿಲ್ಲಾಧಿಕಾರಿಯವರು, ಇದು ಗ್ರಾಮೀಣ ಪ್ರದೇಶವಾಗಿದ್ದು, ಈಗಾಗಲೇ ಈ ಪ್ರದೇಶದಲ್ಲಿ ಅಕ್ರಮ ಗಣಿಗಾರಿಗೆ ನಿಲ್ಲಿಸಲಾಗಿದೆ. ನೆಲಸಮತಟ್ಟು ಮಾಡಲು ಪರವಾನಗಿ ಪಡೆದುಕೊಂಡು ಅದಕ್ಕಿಂತ ವಿಸ್ತಾರವಾದ ಜಾಗದಲ್ಲಿ ಸಮತಟ್ಟು ಮಾಡಿ, ಮಣ್ಣು ಸಾಗಣೆ ಮಾಡಿದ ಆರೋಪ‌ ಕೇಳಿ ಬಂದಿದೆ. ಅದಕ್ಕಾಗಿ ಕಾನೂನು ಕ್ರಮ ತೆಗೆದುಕೊಂಡು ತನಿಖೆ ನಡೆಸಲಾಗುತ್ತಿದೆ ಎಂದರು.

ಬಳಿಕ ಈ ಬಗ್ಗೆ ಮಾತನಾಡಿದ ಸಚಿವ ಸಿ.ಸಿ.ಪಾಟೀಲ್ ಅವರು ಉತ್ತರ ಕನ್ನಡ, ಬೀದರ್ ಉಡುಪಿ,‌ ದಕ್ಷಿಣ ಕನ್ನಡದಲ್ಲಿ ಇಂತಹ ಗಣಿಗಾರಿಕೆ ವಿಷಯಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳು ಹೆಚ್ಚಿವೆ. ಗಣಿಗಾರಿಕೆ ವಿವಾದ, ಸಮಸ್ಯೆಗಳಿಗೆ ಸಂಬಂಧಿಸಿದಂತೆ ನ್ಯಾಯಯುತವಾಗಿ ಕ್ರಮ ತೆಗೆದುಕೊಂಡು ಮುನ್ನಡೆಯಬೇಕಿದೆ ಎಂದರು.

ಇದನ್ನೂ ಓದಿ:5 ಕಾಗೆಗಳು ಸಾವು : ಮಂಜನಾಡಿ ಅರಂಗಡಿ ಗ್ರಾಮದಲ್ಲಿ ಹಕ್ಕಿ ಜ್ವರದ ಆತಂಕ

ಈ ಸಂದರ್ಭದಲ್ಲಿ ಮಂಗಳೂರು ಉಪವಿಭಾಗಾಧಿಕಾರಿ ಮದನ್ ಮೋಹನ್, ತಹಶಿಲ್ದಾರ್ ಗುರುಪ್ರಸಾದ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಭಾರ ಉಪನಿರ್ದೇಶಕ ನಿರಂಜನ್, ಭೂ ಹಾಗೂ ಗಣಿ ಇಲಾಖೆಯ ಇಂಜಿನಿಯರ್ ಸುಷ್ಮಾ, ಬಾಳೆಪುಣಿ ಗ್ರಾಮ ಪಂಚಾಯಿತಿ ಪಿಡಿಒ ಸುನೀಲ್, ಕೊಣಾಜೆ ಠಾಣೆಯ ಪಿಎಸ್ಐ ಯೋಗೀಶ್ವರನ್ ಮೊದಲಾದವರು ಉಪಸ್ಥಿತರಿದ್ದರು.

ABOUT THE AUTHOR

...view details