ಮಂಗಳೂರು: ಎಸ್ಎಸ್ಎಲ್ಸಿಯಲ್ಲಿ 625ಕ್ಕೆ 625 ಅಂಕ ಗಳಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅನುಷ್ ಎ.ಎಲ್.ಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ದೂರವಾಣಿ ಕರೆ ಮಾಡಿ ಅಭಿನಂದಿಸಿದ್ದಾರೆ.
SSLCಯಲ್ಲಿ ಸಾಧನೆಗೈದ ವಿದ್ಯಾರ್ಥಿ ಅನುಷ್: ದೂರವಾಣಿ ಕರೆ ಮಾಡಿ ಅಭಿನಂದಿಸಿದ ಸಚಿವರು - student who score highest marks
ಎಸ್ಎಸ್ಎಲ್ಸಿಯಲ್ಲಿ 625ಕ್ಕೆ 625 ಅಂಕ ಗಳಿಸಿರುವ ವಿದ್ಯಾರ್ಥಿ ಅನುಷ್ ಎ.ಎಲ್. ಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
![SSLCಯಲ್ಲಿ ಸಾಧನೆಗೈದ ವಿದ್ಯಾರ್ಥಿ ಅನುಷ್: ದೂರವಾಣಿ ಕರೆ ಮಾಡಿ ಅಭಿನಂದಿಸಿದ ಸಚಿವರು ವಿದ್ಯಾರ್ಥಿ ಅನುಷ್ ಎ.ಎಲ್](https://etvbharatimages.akamaized.net/etvbharat/prod-images/768-512-8370056-1087-8370056-1597071599822.jpg)
ವಿದ್ಯಾರ್ಥಿ ಅನುಷ್ ಎ.ಎಲ್
ಕೋಟ ಶ್ರೀನಿವಾಸ ಪೂಜಾರಿಯವರ ಕರೆ ಬಂದಿರುವುದರಿಂದ ವಿದ್ಯಾರ್ಥಿ ಅನುಷ್ ಎ.ಎಲ್. ಹರ್ಷಚಿತ್ತರಾಗಿದ್ದಾರೆ. ವಿದ್ಯಾರ್ಥಿ ಗಳಿಸಿರುವ ಅಂಕದ ಬಗ್ಗೆ ವಿಚಾರಿಸಿದ ಸಚಿವರು, ಅನುಷ್ ತಂದೆಯ ಉದ್ಯೋಗ, ಶಾಲೆಯ ಬಗ್ಗೆ ವಿಚಾರಿಸಿದರು.
ಬಳಿಕ ಅನುಷ್ ಎಸ್ಎಸ್ಎಲ್ಸಿಯಲ್ಲಿ ಟಾಪರ್ ಆಗಿರೋದಕ್ಕೆ ಜಿಲ್ಲೆಯ ಪರವಾಗಿ ಅಭಿನಂದನೆ ಸಲ್ಲಿಸಿದರು.