ಕರ್ನಾಟಕ

karnataka

ETV Bharat / state

ಫಸ್ಟ್ ನ್ಯೂರೋ ಆಸ್ಪತ್ರೆ ಸೋಂಕಿನ ಮೂಲ ಪತ್ತೆ ಅನಿವಾರ್ಯ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಬಂಟ್ವಾಳ, ಫಸ್ಟ್ ನ್ಯೂರೋ ಹಾಗೂ ಬೋಳೂರು ಪ್ರಕರಣಗಳಿಗೆ ಸಂಬಂಧಿಸಿದಂತೆ 1000ಕ್ಕೂ ಅಧಿಕ ಮಂದಿಯ ಗಂಟಲು ದ್ರವ ಪರೀಕ್ಷೆ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯಿರಿ ಹೇಳಿದರು.

ಸಚಿವ ಕೋಟ ಶ್ರೀನಿವಾಸ ಪೂಜಾರಿ
ಸಚಿವ ಕೋಟ ಶ್ರೀನಿವಾಸ ಪೂಜಾರಿ

By

Published : May 11, 2020, 11:07 PM IST

ಮಂಗಳೂರು: ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿನ ಮೂಲದ ಬಗ್ಗೆ ಜನರಲ್ಲಿ ಸಂಶಯ ನಿವಾರಣೆ ಅಗತ್ಯ ಇರುವುದರಿಂದ ಸೋಂಕಿನ ಮೂಲ ಪತ್ತೆ ಅನಿವಾರ್ಯವಾಗಿದೆ. ಆದ್ದರಿಂದ ಇದರ ಬಗ್ಗೆ ಮತ್ತಷ್ಟು ವಿವರಣೆ ಪಡೆಯಬೇಕು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ತಜ್ಞ ವೈದ್ಯಕೀಯ ತಂಡದೊಂದಿಗೆ ಸಚಿವರು ಸಭೆ ನಡೆಸಿದರು. ಬಳಿಕ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯಿರಿ ಮಾತನಾಡಿ, ಬಂಟ್ವಾಳ, ಫಸ್ಟ್ ನ್ಯೂರೋ ಹಾಗೂ ಬೋಳೂರು ಪ್ರಕರಣಗಳಿಗೆ ಸಂಬಂಧಿಸಿದಂತೆ 1000ಕ್ಕೂ ಅಧಿಕ ಮಂದಿಯ ಗಂಟಲು ದ್ರವ ಪರೀಕ್ಷೆ ಮಾಡಲಾಗಿದೆ. ಇದರಲ್ಲಿ 17 ಮಂದಿಯಲ್ಲಿ ಸೋಂಕು ದೃಢಗೊಂಡಿದೆ. ಈ ಪೈಕಿ 8 ಬಂಟ್ವಾಳ, 3 ಫಸ್ಟ್ ನ್ಯೂರೋ ಹಾಗೂ 6 ಬೋಳೂರು ಪ್ರದೇಶಕ್ಕೆ ಸಂಬಂಧಿಸಿವೆ ಎಂದರು.

ಫಸ್ಟ್ ನ್ಯೂರೋ ಆಸ್ಪತ್ರೆಯ ಸಿಬ್ಬಂದಿಗೆ ಸೋಂಕು ದೃಢಗೊಂಡ ಬಳಿಕ ಅವರ ಸಂಪರ್ಕದಲ್ಲಿದ್ದ ಎಲ್ಲರನ್ನೂ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ. ಫಸ್ಟ್ ನ್ಯೂರೋ ಆಸ್ಪತ್ರೆಗೆ ಕೇರಳ ರಾಜ್ಯದಿಂದಲೂ ಹಲವಾರು ಮಂದಿ ಒಳರೋಗಿ, ಹೊರರೋಗಿಯಾಗಿ ಚಿಕಿತ್ಸೆ ಪಡೆದು, ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇವರ ಗಂಟಲು ದ್ರವ ತಪಾಸಣೆ ಅಗತ್ಯವಾಗಿದ್ದು, ಕೇರಳ ಸರ್ಕಾರದ ಜತೆ ಸಂಪರ್ಕಿಸಿ ಈ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಅದೇ ರೀತಿ ಚಿಕ್ಕಮಂಗಳೂರು ಹಾಗೂ ಮಡಿಕೇರಿ ಜಿಲ್ಲೆಗಳಿಂದಲೂ ಈ ಆಸ್ಪತ್ರೆಗೆ ಹಲವಾರು ರೋಗಿಗಳು ದಾಖಲಾಗಿದ್ದು, ಮಡಿಕೇರಿ ಜಿಲ್ಲೆಯ ರೋಗಿಗಳಲ್ಲಿ ಸೋಂಕು ದೃಢಗೊಂಡಿದೆ ಎಂದು ತಿಳಿಸಿದರು.

ABOUT THE AUTHOR

...view details