ಕರ್ನಾಟಕ

karnataka

ETV Bharat / state

ಧರ್ಮಸ್ಥಳಕ್ಕೆ ಕಂದಾಯ ಸಚಿವ ಆರ್.ಅಶೋಕ್ ಭೇಟಿ - ಸಚಿವ ಆರ್​ ಅಶೋಕ್​ ಲೇಟೆಸ್ಟ್​ ಧರ್ಮಸ್ಥಳ ಭೇಟಿ

ಧರ್ಮಸ್ಥಳಕ್ಕೆ ಸಚಿವ ಆರ್. ಅಶೋಕ್ ಭೇಟಿ ನೀಡಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.

minister R Ashok visits Dharmastala
ಧರ್ಮಸ್ಥಳಕ್ಕೆ ಸಚಿವ ಆರ್. ಅಶೋಕ್ ಭೇಟಿ

By

Published : Apr 9, 2021, 11:00 AM IST

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂದಾಯ ಸಚಿವ ಆರ್.‌ಅಶೋಕ್ ಶುಕ್ರವಾರ ಭೇಟಿ ನೀಡಿದರು. ಬೆಳಗ್ಗೆ ಮಂಜುನಾಥ ಸ್ವಾಮಿ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿ ಆಶೀರ್ವಾದ ಪಡೆದರು. ಸಚಿವರ ಜೊತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಇದ್ದರು.

ಕ್ಷೇತ್ರದ ವತಿಯಿಂದ ಸಚಿವರನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಿದರು. ಗುರುವಾರ ಸಂಜೆ ಕುಂಜಾಡಿ ಗುತ್ತುವಿನಲ್ಲಿ‌ ನಡೆದ ಧರ್ಮನೇಮದಲ್ಲಿ ಪಾಲ್ಗೊಂಡ ಸಚಿವರು ರಾತ್ರಿ ಧರ್ಮಸ್ಥಳ ಸನ್ನಿಧಿ ಅತಿಥಿ ಗೃಹದಲ್ಲಿ ತಂಗಿದ್ದರು. ಶುಕ್ರವಾರ ಬೆಳಗ್ಗೆ ಮಂಜುನಾಥ ಸ್ವಾಮಿ ದರ್ಶನ ಪಡೆದು ನಂತರ ಬೆಳ್ತಂಗಡಿಯ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ತಾಲೂಕಿನ ಅರ್ಹ ಫಲಾನುಭವಿಗಳಿಗೆ 94 ಸಿ ಹಕ್ಕುಪತ್ರ ವಿತರಣೆ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

ABOUT THE AUTHOR

...view details