ಮಂಗಳೂರು: ನನ್ನ ಅವಧಿಯಲ್ಲಿ ಕರ್ನಾಟಕವನ್ನು ಡೇರೆ ಮುಕ್ತ ಮಾಡಲು ಅಡಿಗಲ್ಲು ಹಾಕುತ್ತೇನೆ ಎಂದು ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ನಿಗಮದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದರು.
ಡೇರೆ ಮುಕ್ತ ಕರ್ನಾಟಕಕ್ಕೆ ಅಡಿಗಲ್ಲು: ರವೀಂದ್ರ ಶೆಟ್ಟಿ ಉಳಿದೊಟ್ಟು - ಮಂಗಳೂರಿಗೆ ಭೇಟಿ ನೀಡಿದ್ದ ರವೀಂದ್ರ ಶೆಟ್ಟಿ ಉಳಿದೊಟ್ಟು
ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ನಿಗಮದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ಮೊದಲ ಬಾರಿಗೆ ಮಂಳೂರಿಗೆ ಭೇಟಿ ನೀಡಿದ್ದರು. ಈ ವೇಳೆ ಅವರಿಗೆ ಅದ್ಧೂರಿಯಾಗಿ ಸ್ವಾಗತವನ್ನು ಕೋರಲಾಯಿತು.
ಅಧಿಕಾರ ಸ್ವೀಕರಿಸಿದ ಬಳಿಕ ಮಂಗಳೂರಿಗೆ ಪ್ರಥಮ ಬಾರಿಗೆ ಬಂದ ಆಗಮಿಸಿದ್ದು, ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ಅಲೆಮಾರಿ ನಿಗಮವು ಕಳೆದ ಬಾರಿ ಆರಂಭವಾಗಿದ್ದು, ಸಿಎಂ ಯಡಿಯೂರಪ್ಪನವರು ನನ್ನನ್ನು ಈ ನಿಗಮದ ಪ್ರಥಮ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದಾರೆ. ಇಡೀ ರಾಜ್ಯದಲ್ಲಿ ಸಾಧ್ಯವಾಗದಿದ್ದರೂ ಕೆಲವು ಜಿಲ್ಲೆಗಳಲ್ಲಾದರೂ ಡೇರೆ ಮುಕ್ತ ಮಾಡಿ ಮುಂದಿನ ಅಧ್ಯಕ್ಷರುಗಳಿಗೆ ಮಾದರಿಯಾಗಿ ಕೆಲಸ ಮಾಡುತ್ತೇನೆ. ಈಗಾಗಲೇ ಹತ್ತಾರು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಈ ಬಗ್ಗೆ ಪರಿಶೀಲನೆ ನಡೆಸಿದ್ದೇನೆ ಎಂದೇಳಿದರು.
ಅಲೆಮಾರಿ ಜನ ಸಮುದಾಯ ಸಾಮಾಜಿಕ ವ್ಯವಸ್ಥೆಯಲ್ಲಿ ಅತ್ಯಂತ ಶೋಚನೀಯ ಸ್ಥಿತಿಯಲ್ಲಿದೆ. ಮೂಲಭೂತ ಸೌಕರ್ಯಗಳಿಂದ ವಂಚಿತರಾದ ಜನಾಂಗದ ಜನರು ಡೇರೆಗಳಲ್ಲಿ ಜೀವನ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿನಲ್ಲಿ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಅದರ ಎಲ್ಲಾ ವಿವರಗಳನ್ನು ಸಿಎಂ ಅವರಿಗೆ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ಉಳಿದ ಜಿಲ್ಲೆಗಳಿಗೂ ಪ್ರವಾಸ ಕೈಗೊಳ್ಳಲಿದ್ದೇನೆ. ಈ ಮೂಲಕ ಧ್ವನಿ ಇಲ್ಲದವರಿಗೆ ಧ್ವನಿ ಕೊಡುವ ಮೂಲಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನ ಸಮುದಾಯದವರಿಗೆ ನ್ಯಾಯವನ್ನು ಒದಗಿಸುವ ಕಾರ್ಯ ಮಾಡುತ್ತೇವೆ ಎಂದು ಹೇಳಿದರು.