ಮಂಗಳೂರು:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬದಲಾವಣೆ ವಿಚಾರ ಹಾಗು ಕಾಂಗ್ರೆಸ್ನಿಂದ ವಲಸೆ ಹೋಗಿರುವ ಸಚಿವರು ರಾಜೀನಾಮೆ ನೀಡಲಿದ್ದಾರೆ ಎಂಬುವುದು ಅವರ ಪಕ್ಷದ ವಿಚಾರ. ನಮಗೆ ಅವಶ್ಯಕತೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಮಂಗಳೂರಿನಲ್ಲಿ ಮಾತನಾಡಿದ ಅವರು, ಈಗ ಅವರು ಬಿಜೆಪಿ ಶಾಸಕರು. ಅವರು ಅಲ್ಲಿ ಮಂತ್ರಿಗಳಾಗಿದ್ದಾರೆ. ಅವರ ಪಾರ್ಟಿ ವಿಚಾರ ನಮಗೆ ಅವಶ್ಯಕತೆ ಇಲ್ಲ. ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಬದಲಿಸುತ್ತಾರೋ, ಇಟ್ಟುಕೊಳ್ಳುತ್ತಾರೋ ಎಂಬ ಬಗ್ಗೆ ನಮಗೆ ಮಾಹಿತಿ ಇಲ್ಲ .