ಕರ್ನಾಟಕ

karnataka

ETV Bharat / state

ಸಿಡಿ ಪ್ರಕರಣದಲ್ಲಿ ವೈಯಕ್ತಿಕ ಹೇಳಿಕೆ ನೀಡುವುದಿಲ್ಲ: ಸಚಿವ ಸುಧಾಕರ್​ - Minister Sudhakar in Mangaluru

ಸಿಡಿ ಪ್ರಕರಣ ವಿಚಾರದಲ್ಲಿ ಮಾತನಾಡಲು ಇಷ್ಟಪಡುವುದಿಲ್ಲ ಎಂದು ಸಚಿವ ಸುಧಾಕರ್ ಮಂಗಳೂರು ವಿಮಾನ ನಿಲ್ದಾಣದ ಬಳಿ ಮಾಧ್ಯಮಕ್ಕೆ ಹೇಳಿಕೆ ನೀಡಿದರು.

Mangaluru
ಆರೋಗ್ಯ ಸಚಿವ ಡಾ. ಕೆ ಸುಧಾಕರ್

By

Published : Mar 30, 2021, 2:09 PM IST

ಮಂಗಳೂರು: ಸಿಡಿ ಪ್ರಕರಣ ವಿಚಾರದಲ್ಲಿ ವೈಯಕ್ತಿಕವಾಗಿ ಅದರ ಬಗ್ಗೆ ಮಾತನಾಡಲು ಇಷ್ಟಪಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಪಕ್ಷ ನನ್ನ ಹೆಸರನ್ನು ಹಾಕಿಲ್ಲ. ಆದರೆ, ಮಸ್ಕಿಯಲ್ಲಿ ಪ್ರಚಾರ ಮಾಡಲು ಹೋಗಲು ನಿರ್ಧರಿಸಿದ್ದೇನೆ ಎಂದರು.

ಆರೋಗ್ಯ ಸಚಿವ ಡಾ. ಕೆ ಸುಧಾಕರ್

ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ನಿನ್ನೆ ಮಾರ್ಗಸೂಚಿ ಬಗ್ಗೆ ಹೇಳಿಕೆ ನೀಡಿದ್ದರು. ಇವತ್ತು ಮಾರ್ಗಸೂಚಿಯಲ್ಲಿ ಏನೇನು ಇರುತ್ತದೆ ಎನ್ನುವುದನ್ನು ಸರ್ಕಾರವು ಪ್ರಕಟಿಸಲಿದೆ. ಎರಡು ವಾರಗಳ ಕಾಲ ಚಳವಳಿಗೆ ನಿರ್ಬಂಧ ಹೇರಲಾಗಿದೆ. ಬೆಂಗಳೂರಿನಲ್ಲಿ ಚಳವಳಿ ಮೇಲೆ ಹೆಚ್ಚಿನ ನಿರ್ಬಂಧ ಹೇರಲಾಗಿದೆ ಎಂದರು.

ABOUT THE AUTHOR

...view details