ಕರ್ನಾಟಕ

karnataka

ETV Bharat / state

ಲೇಡಿಗೋಷನ್ ಆಸ್ಪತ್ರೆಗೆ ರಾಣಿ ಅಬ್ಬಕ್ಕ ಆಸ್ಪತ್ರೆಯೆಂದು ಮರು ನಾಮಕರಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ - ಸಚಿವ ಸುನಿಲ್ ಕುಮಾರ್ ಹೇಳಿಕೆ

ಲೇಡಿಗೋಷನ್ ಹೆರಿಗೆ ಆಸ್ಪತ್ರೆಗೆ ಸ್ವಾತಂತ್ರ್ಯ ಹೋರಾಟಗಾರ್ತಿ ಉಳ್ಳಾಲದ ರಾಣಿ ಅಬ್ಬಕ್ಕ ಹೆಸರು ಇಡಲು ಸರಕಾರಕ್ಕೆ ಪ್ರಸ್ತಾವನೆ ನೀಡಲಾಗಿದೆ. ಸ್ವಾತಂತ್ರ್ಯ ಅಮೃತಮಹೋತ್ಸವದ ಈ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ನಾಡಿಗೆ ಪರಿಚಯ ಮಾಡುವ ಅಗತ್ಯ ಇರುವ ಹಿನ್ನೆಲೆಯಲ್ಲಿ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ..

ಮಂಗಳೂರಿನಲ್ಲಿ ಸಚಿವ ಸುನಿಲ್ ಕುಮಾರ್ ಹೇಳಿಕೆ
ಮಂಗಳೂರಿನಲ್ಲಿ ಸಚಿವ ಸುನಿಲ್ ಕುಮಾರ್ ಹೇಳಿಕೆ

By

Published : Feb 26, 2022, 6:42 PM IST

ಮಂಗಳೂರು :ಬ್ರಿಟಿಷ್ ಆಡಳಿತ ಕಾಲದಲ್ಲಿ ನಿರ್ಮಾಣವಾಗಿದ್ದ ಲೇಡಿಗೋಷನ್ ಆಸ್ಪತ್ರೆಯ ಹೆಸರು ಬದಲಾವಣೆಗೆ ಸಚಿವ ಸುನಿಲ್ ಕುಮಾರ್ ಮುಂದಾಗಿದ್ದು, ಇದು ವಿವಾದಕ್ಕೆ ಕಾರಣವಾಗುವ ಸಾಧ್ಯತೆ ದಟ್ಟವಾಗಿದೆ.

ಮಂಗಳೂರಿನಲ್ಲಿ ಸಚಿವ ಸುನಿಲ್ ಕುಮಾರ್ ಹೇಳಿಕೆ

ನಗರದ ಖಾಸಗಿ ಹೋಟೆಲ್​​ನಲ್ಲಿ ಮಾತನಾಡಿದ ಅವರು, ಲೇಡಿಗೋಷನ್ ಹೆರಿಗೆ ಆಸ್ಪತ್ರೆಗೆ ಸ್ವಾತಂತ್ರ್ಯ ಹೋರಾಟಗಾರ್ತಿ ಉಳ್ಳಾಲದ ರಾಣಿ ಅಬ್ಬಕ್ಕ ಹೆಸರು ಇಡಲು ಸರಕಾರಕ್ಕೆ ಪ್ರಸ್ತಾವನೆ ನೀಡಲಾಗಿದೆ.

ಸ್ವಾತಂತ್ರ್ಯ ಅಮೃತಮಹೋತ್ಸವದ ಈ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ನಾಡಿಗೆ ಪರಿಚಯ ಮಾಡುವ ಅಗತ್ಯ ಇರುವ ಹಿನ್ನೆಲೆಯಲ್ಲಿ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಅಬ್ಬಕ್ಕನ ಹೆಸರಿಡಲು ಯಾರಾದರೂ ವಿರೋಧ ಮಾಡುತ್ತಾರೆಯೇ ಕಾದು ನೋಡುವ ಎಂದರು.

ದ.ಕ. ಜಿಲ್ಲೆಯಲ್ಲಿ ವಿದ್ಯುತ್ ಬಳಕೆ ಹೆಚ್ಚಳವಾಗುತ್ತಿದ್ದು, ಸರಬರಾಜು ಕೂಡ ಅಧಿಕವಾಗಿದೆ. ಆದ್ದರಿಂದ 400 ಕೆವಿ ಸ್ಟೇಷನ್ ನಿರ್ಮಾಣ ಮಾಡಲಾಗುತ್ತಿದೆ. ಈಗಾಗಲೇ ಇದಕ್ಕೆ ಮಂಗಳೂರಿನಲ್ಲಿ ಸ್ಥಳ ಗುರುತಿಸಲಾಗಿದೆ ಎಂದರು.

ಫೆ.19 ರಿಂದ 28ರವರೆಗೆ ದ.ಕ. ಜಿಲ್ಲೆಯಲ್ಲಿ ನಡೆದ ಕಡತ ವಿಲೇವಾರಿ ಅಭಿಯಾನ ಯಶಸ್ವಿಯಾಗಿದೆ. ಒಂದೇ ವಾರದಲ್ಲಿ 68,952 ಅರ್ಜಿಗಳ ವಿಲೇವಾರಿ ಮಾಡಲಾಗಿದೆ. ವಿವಿಧ ಹಂತಗಳಲ್ಲಿ ವಿಲೇವಾರಿಯಾಗದೆ ಉಳಿದ 85,384 ಅರ್ಜಿಗಳಲ್ಲಿ ಶೇ.80ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.

ಮುಂದಿನ ಸೋಮವಾರದೊಳಗೆ ಉಳಿದ ಅರ್ಜಿಗಳನ್ನು ವಿಲೇವಾರಿ ಮಾಡುವಂತೆ ಸೂಚನೆ ನೀಡಲಾಗಿದೆ‌. ಜಿಲ್ಲಾಧಿಕಾರಿಯವರ ಸಹಿತ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಜಿಲ್ಲಾದ್ಯಂತ ಪ್ರವಾಸ ಮಾಡಿ ಕಡತ ವಿಲೇವಾರಿಯಲ್ಲಿ ಹೆಚ್ಚಿನ ಶ್ರಮ ವಹಿಸಿದ್ದಾರೆ.

ಅಲ್ಲದೆ ಸರಕಾರಿ ಸೌಲಭ್ಯದ ಅರ್ಜಿ ವಿಲೇವಾರಿಯಲ್ಲಿ 1,700 ಹೊಸ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಲಾಗಿದೆ. ಈ ಮೂಲಕ ಆಡಳಿತಕ್ಕೆ ಹೊಸ ವೇಗವನ್ನು ನೀಡಲಾಗಿದೆ.

ಈ ಮೂಲಕ ಇಂತಹ ಅಭಿಯಾನವು ಮತ್ತೆ ನಡೆಯುವ ದಿನಗಳು ಬರಬಾರದು. ಆದ್ದರಿಂದ ಅಧಿಕಾರಿಗಳು ತಮ್ಮಲ್ಲಿಗೆ ಬಂದಿರುವ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಬೇಕೆಂದು ಸಚಿವ ಸುನಿಲ್ ಕುಮಾರ್ ಅವರು ಸೂಚನೆ ನೀಡಿದರು.

ABOUT THE AUTHOR

...view details