ಕುಕ್ಕೆ ಸುಬ್ರಹ್ಮಣ್ಯ: ಮಕ್ಕಳ ಆರೋಗ್ಯ ಕಾಳಜಿ ಮತ್ತು ಪೋಷಕರ ಹಿತವನ್ನು ಗಮನದಲ್ಲಿಟ್ಟುಕೊಂಡು ಶಾಲಾ ಆರಂಭದ ಕುರಿತಂತೆ ಅಧಿಕೃವಾಗಿ ತಿಳಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿರುವ ಅವರು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದ ನಂತರ ಮಾಧ್ಯಮದವರ ಜೊತೆ ಮಾತನಾಡಿದರು.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ರಾಜ್ಯದಲ್ಲಿ ಕೊರೊನಾ ಆರ್ಭಟ ಹೆಚ್ಚಾಗಿದ್ದು, ಸಹಜ ಸ್ಥಿತಿಗೆ ಬರುವವರೆಗೂ ಸರ್ಕಾರ ಶಾಲಾ ಆರಂಭ ಮಾಡುವುದಿಲ್ಲ ಎಂದರು.
ಆನ್ಲೈನ್ ಶಿಕ್ಷಣಕ್ಕೆ ನಮ್ಮ ರಾಜ್ಯದಲ್ಲಿ ಹಲವಾರು ಕಡೆಗಳಲ್ಲಿ, ಅದರಲ್ಲೂ ಗ್ರಾಮೀಣ ಪ್ರದೇಶಗಳಲ್ಲಿ ಪೂರಕವಾದ ವಾತಾವರಣವಿಲ್ಲ. ಗ್ರಾಮೀಣ ಭಾಗದಲ್ಲಿ ನೆಟ್ವರ್ಕ್ ಸಮಸ್ಯೆ ಇರುವುದರಿಂದ ಇದು ಅಸಾಧ್ಯ ಎಂದು ಸಚಿವರು ಹೇಳಿದರು.