ಬೆಳ್ತಂಗಡಿ: ಸಣ್ಣ ನೀರಾವರಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಮತ್ತು ನೂತನ ಸಚಿವರಾಗಿ ಆಯ್ಕೆಯಾದ ಅಂಗಾರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ ಮಾತುಕತೆ ನಡೆಸಿದರು.
ಧರ್ಮಸ್ಥಳ ಕ್ಷೇತ್ರಕ್ಕೆ ಸಚಿವರಾದ ಮಾಧುಸ್ವಾಮಿ, ಅಂಗಾರ ಭೇಟಿ
ಸಚಿವರಾದ ಮಾಧುಸ್ವಾಮಿ ಹಾಗೂ ಅಂಗಾರ ಅವರು ಇಂದು ಧರ್ಮಸ್ಥಳ ಮಂಜುನಾಥನ ದರ್ಶನ ಮಾಡಿ ಪೂಜೆ ಸಲ್ಲಿಸಿದರು. ಬಳಿಕ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
dharmastala
ಮಾಧುಸ್ವಾಮಿ ಹಾಗೂ ಅಂಗಾರ ಇಂದು ಧರ್ಮಸ್ಥಳ ಮಂಜುನಾಥನ ದರ್ಶನ ಮಾಡಿ ಪೂಜೆ ಸಲ್ಲಿಸಿದರು. ಬಳಿಕ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಹೆಗ್ಗಡೆಯವರು ಉಭಯ ಸಚಿವರುಗಳಿಗೆ ಶುಭ ಹಾರೈಸಿ ಗೌರವಿಸಿದರು. ಈ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.