ಕರ್ನಾಟಕ

karnataka

ETV Bharat / state

ಟಿವಿ ನೋಡಬೇಡ ಎಂದು ಆಫ್​ ಮಾಡಿದ್ದಕ್ಕೆ ಬಾಲಕ ಆತ್ಮಹತ್ಯೆ - ಟಿವಿ ನೋಡಬೇಡ ಎಂದಿದ್ದಕ್ಕೆ ಬಾಲಕ ಆತ್ಮಹತ್ಯೆ

ಮಗನನ್ನು ಕರೆದಾಗ ಯಾವುದೇ ಪ್ರತ್ಯುತ್ತರ ಬಾರದ್ದನ್ನು ಕಂಡು, ಬಾಗಿಲನ್ನು ಒಡೆದು ಒಳಗೆ ಹೋದಾಗ ಫ್ಯಾನಿಗೆ ಸೀರೆಯನ್ನು ಕಟ್ಟಿಕೊಂಡು ಆತ್ಮಹತ್ಯೆ ಮಾಡಿದ ಸ್ಥಿತಿಯಲ್ಲಿ ಮಗ ಪತ್ತೆಯಾಗಿದ್ದಾನೆ. ತಕ್ಷಣವೇ ಬಾಲಕನನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆಂದು ಕರೆತಂದರೂ ಆತ ಅದಾಗಲೇ ಮೃತಪಟ್ಟಿದ್ದ..

minor-boy-committed-suicide-in-vitla
ಟಿವಿ ನೋಡಬೇಡ ಎಂದು ಆಫ್​ ಮಾಡಿದ್ದಕ್ಕೆ ಬಾಲಕ ಆತ್ಮಹತ್ಯೆ

By

Published : May 8, 2022, 7:26 PM IST

ಬಂಟ್ವಾಳ :ಟಿವಿ ನೋಡಬೇಡ ಎಂದು ಬುದ್ಧಿವಾದ ಹೇಳಿ ಅದನ್ನ ಆಫ್ ಮಾಡಿದ್ದಕ್ಕೆ ಬೇಸರಗೊಂಡ ಬಾಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣಕನ್ನಡ ಜಿಲ್ಲೆಯ ವಿಟ್ಲದ ಕಸಬಾ ಗ್ರಾಮದ ಜೋಗಿಬೆಟ್ಟು ಎಂಬಲ್ಲಿ ನಡೆದಿದೆ.

ವಿಟ್ಲ ಕಸಬಾ ಗ್ರಾಮದ ಜೋಗಿಬೆಟ್ಟು ನಿವಾಸಿ ವಾಮನ ಪೂಜಾರಿ ಎಂಬುವರ ಮಗನೇ ಆತ್ಮಹತ್ಯೆ ಮಾಡಿಕೊಂಡ ಬಾಲಕನಾಗಿದ್ದಾನೆ. ಈತ ಸದ್ಯ 8ನೇ ತರಗತಿ ಪಾಸ್​ ಆಗಿದ್ದು, ಬೇಸಿಗೆ ರಜೆ ಹಿನ್ನೆಲೆಯಲ್ಲಿ ಮನೆಯಲ್ಲಿದ್ದ. ಭಾನುವಾರ ಬೆಳಗ್ಗೆ ಮನೆಯಲ್ಲಿ ಈತ ಟಿವಿ ನೋಡುತ್ತಿದ್ದ.

ಈ ಸಂದರ್ಭ ತಂದೆ ಬೆಳಗ್ಗೆಯೇ ಯಾಕೆ ಟಿವಿ ನೋಡುತ್ತಿದ್ದೀಯಾ ಎಂದು ಬುದ್ಧಿ ಮಾತು ಹೇಳಿ ಟಿವಿ ಆಫ್ ಮಾಡಿ ಮನೆಯ ಅಂಗಳದಲ್ಲಿ ಕಟ್ಟಿಗೆ ಕೆಲಸಕ್ಕೆ ಹೋಗಿದ್ದರು. ಸ್ವಲ್ಪ ಸಮಯದ ನಂತರ ತಾಯಿ ಮನೆಯಲ್ಲಿನ ಮಲಗುವ ಕೋಣೆಗೆ ಒಳಗಡೆಯಿಂದ ಚಿಲಕ ಹಾಕಿರುವುದನ್ನು ಗಮನಿಸಿ ಗಾಬರಿಗೊಂಡು ಪತಿಯನ್ನು ಕರೆದಿದ್ದಾರೆ.

ಆಗ ಮಗನನ್ನು ಕರೆದಾಗ ಯಾವುದೇ ಪ್ರತ್ಯುತ್ತರ ಬಾರದ್ದನ್ನು ಕಂಡು, ಬಾಗಿಲನ್ನು ಒಡೆದು ಒಳಗೆ ಹೋದಾಗ ಫ್ಯಾನಿಗೆ ಸೀರೆಯನ್ನು ಕಟ್ಟಿಕೊಂಡು ಆತ್ಮಹತ್ಯೆ ಮಾಡಿದ ಸ್ಥಿತಿಯಲ್ಲಿ ಮಗ ಪತ್ತೆಯಾಗಿದ್ದಾನೆ. ತಕ್ಷಣವೇ ಬಾಲಕನನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆಂದು ಕರೆತಂದರೂ ಆತ ಅದಾಗಲೇ ಮೃತಪಟ್ಟಿದ್ದ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕಲಬುರಗಿಯಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಹತ್ಯೆ

ABOUT THE AUTHOR

...view details