ಕಡಬ: ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಬಾಲಕಿಯೊಬ್ಬಳು ಕಡಬ ಠಾಣಾ ವ್ಯಾಪ್ತಿಯ ಕೊಂಬಾರು ಗ್ರಾಮದ ಕೆಂಜಾಳ ಎಂಬಲ್ಲಿ ತನ್ನ ಪ್ರಿಯಕರನೊಂದಿಗೆ ಪತ್ತೆಯಾಗಿದ್ದಾಳೆ.
ಬೆಂಗಳೂರಿನಿಂದ ನಾಪತ್ತೆಯಾದ ಬಾಲಕಿ ಕಡಬದ ಕೊಂಬಾರಿನಲ್ಲಿ ಪತ್ತೆ - ಬೆಂಗಳೂರಿನಿಂದ ನಾಪತ್ತೆಯಾದ ಬಾಲಕಿ ಕಡಬದಲ್ಲಿ ಪತ್ತೆ
ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಬಾಲಕಿಯೊಬ್ಬಳು ಕಡಬ ಠಾಣಾ ವ್ಯಾಪ್ತಿಯ ಕೊಂಬಾರು ಗ್ರಾಮದ ಕೆಂಜಾಳ ಎಂಬಲ್ಲಿ ತನ್ನ ಪ್ರಿಯಕರನೊಂದಿಗೆ ಪತ್ತೆಯಾಗಿದ್ದಾಳೆ. ಸದ್ಯ ಬೆಂಗಳೂರು ಪೊಲೀಸರು ಜೋಡಿಯನ್ನು ಕರೆದುಕೊಂಡು ಹೋಗಿದ್ದಾರೆ.
ಬೆಂಗಳೂರಿನ ಶ್ರೀರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕುಮಾರಿ ಪುಷ್ಪ (16) ಎಂಬಾಕೆಯನ್ನು ಬೆಂಗಳೂರು ನಿವಾಸಿಯಾದ ಆಕೆಯ ಪ್ರಿಯಕರ ಅನಿರುದ್ಧ್ ಅಪಹರಿಸಿರುವ ಬಗ್ಗೆ ಶ್ರೀರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಧರ್ಮಸ್ಥಳಕ್ಕೆ ಬಂದಿದ್ದ ಜೋಡಿ ಪಾದಯಾತ್ರೆಯ ಮೂಲಕ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಕೊಂಬಾರು ಗ್ರಾಮದ ಕೆಂಜಾಳ ಎಂಬಲ್ಲಿ ಕಡಬ ಪೊಲೀಸರು ವಿಚಾರಣೆ ನಡೆಸಿ ಈ ಬಗ್ಗೆ ಬೆಂಗಳೂರು ಶ್ರೀರಾಂಪುರ ಪೊಲೀಸ್ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಕಡಬಕ್ಕೆ ಆಗಮಿಸಿದ ಬೆಂಗಳೂರು ಶ್ರೀರಾಂಪುರ ಪೊಲೀಸರು, ಜೋಡಿಯನ್ನು ಬೆಂಗಳೂರಿಗೆ ಕರೆದೊಯ್ದಿದ್ದಾರೆ ಎಂಬುದಾಗಿ ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ರುಕ್ಮನಾಯ್ಕ್ ತಿಳಿಸಿದ್ದಾರೆ.