ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಕ್ವಾರಂಟೈನ್ ನಿಯಮವನ್ನು ಉಲ್ಲಂಘಿಸಿದ್ದಾರೆಯೇ? ಎಂಬ ವಿಚಾರ ಭಾರಿ ಚರ್ಚೆಗೆ ಗ್ರಾಸವಾಗಿದೆ.
ಕ್ವಾರಂಟೈನ್ನಲ್ಲಿರಬೇಕಾದ ರೈ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ದ.ಕ. ಜಿಲ್ಲಾ ಪ್ರವಾಸ ಕೈಗೊಂಡಿರುವುದರಿಂದ ಅವರ ಜತೆ ಕಾಣಿಸಿಕೊಂಡಿದ್ದಾರೆ.
ಜುಲೈ 17ರಂದು ತಮಗೆ ಕೊರೊನಾ ಸೋಂಕು ದೃಢಗೊಂಡಿದ್ದು, ಬೆಂಗಳೂರಿನಲ್ಲಿ ಕ್ವಾರಂಟೈನ್ಗೆ ಒಳಗಾಗಿದ್ದೇನೆ ಎಂದು ಮಿಥುನ್ ರೈ ಟ್ವೀಟ್ ಮಾಡಿ ತಿಳಿಸಿದ್ದರು.
ಬಳಿಕ ಎಲ್ಲೂ ಕಾಣಿಸಿಕೊಳ್ಳದ ಅವರು, ಇಂದು ಡಿಕೆಶಿಯವರ ಮಂಗಳೂರು ಭೇಟಿಯ ವೇಳೆ ಅವರ ಜತೆ ಕಾಣಿಸಿಕೊಂಡಿದ್ದಾರೆ. ಸರ್ಕಾರದ ನಿಯಮದಂತೆ ಕೊರೊನಾ ಸೋಂಕು ದೃಢಗೊಂಡಿರುವ ವ್ಯಕ್ತಿ ಕನಿಷ್ಠ 17 ದಿನಗಳ ಕಾಲ ಕ್ವಾರಂಟೈನ್ಗೆ ಒಳಗಾಗುವುದು ಕಡ್ಡಾಯ. ಆದರೆ ಮಿಥುನ್ ರೈ 14 ದಿನದಲ್ಲೇ ಕ್ವಾರಂಟೈನ್ ನಿಯಮ ಮುರಿದಿದ್ದಾರೆಯೇ? ಎಂಬ ವಿಚಾರ ಚರ್ಚೆಗೊಳಗಾಗಿದೆ.