ಮಂಗಳೂರು: ಸುರತ್ಕಲ್ ಬ೦ಟರ ಸಂಘದ ಬಳಿ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ನಡೆಯುತ್ತಿರುವ ರಾಜಕಾಲುವೆಯ ಕಾಮಗಾರಿಯನ್ನು ಶಾಸಕ ಡಾ. ವೈ.ಭರತ್ ಶೆಟ್ಟಿ ವೀಕ್ಷಿಸಿದರು.
ರಾಜಕಾಲುವೆ ಕಾಮಗಾರಿ ವೀಕ್ಷಿಸಿದ ಶಾಸಕ ಭರತ್ ಶೆಟ್ಟಿ - Rajakaluve constractions
ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 12 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಕಾಮಾಗಾರಿಗಳು ನಡೆಯುತ್ತಿದ್ದು, ಶಾಸಕ ಡಾ. ವೈ.ಭರತ್ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಕಾಮಾಗಾರಿ ವೀಕ್ಷಿಸಿದರು.
![ರಾಜಕಾಲುವೆ ಕಾಮಗಾರಿ ವೀಕ್ಷಿಸಿದ ಶಾಸಕ ಭರತ್ ಶೆಟ್ಟಿ Rajakaluve constractions](https://etvbharatimages.akamaized.net/etvbharat/prod-images/768-512-7129010-634-7129010-1589022017861.jpg)
ಈ ಸಂದರ್ಭ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳಲ್ಲಿ ಹೂಳೆತ್ತುವ ಕಾಮಗಾರಿ ಪ್ರಗತಿಯಲ್ಲಿದೆ. ಈ ಬಾರಿ ಮಳೆಗಾಲದಲ್ಲಿ ಕೃತಕ ನೆರೆ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು. ಇನ್ನು ಎಪಿಎಂಸಿ ಪ್ರಾಂಗಣದಲ್ಲಿ ಮಳೆ ಬಂದು ಸಮಸ್ಯೆಯಾಗಿರುವುದರ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಎಪಿಎಂಸಿ ಪ್ರಾಂಗಣದಲ್ಲಿ ವ್ಯಾಪಾರಿಗಳಿಗೆ ಮಳೆಗಾಲದಲ್ಲಿ ಯಾವುದೇ ತೊಂದರೆಯಾಗದಂತೆ ಮೂಲ ಸೌಕರ್ಯ ಒದಗಿಸಿಕೊಡಲಾಗುವುದು. ಈಗಾಗಲೇ ಗೋಡೌನ್ ಒದಗಿಸುವ ಕೆಲಸ ನಡೆಯುತ್ತಿದೆ. ರಖಂ ವ್ಯಾಪಾರಸ್ಥರಿಗೆ ಮಾತ್ರ ಇಲ್ಲಿ ಅವಕಾಶವಿದ್ದು, ಚಿಲ್ಲರೆ ವ್ಯಾಪಾರಸ್ಥರಿಗೆ ಇಲ್ಲಿ ಅವಕಾಶವಿಲ್ಲ ಎಂದರು.