ಮಂಗಳೂರು :ಕುಳಾಯಿ 9ನೇ ವಾರ್ಡ್‌ನಲ್ಲಿ ನಿರ್ಮಾಣವಾಗಲಿರುವ ಸುಮಾರು 35 ಲಕ್ಷ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ಕುಳಾಯಿ ವಿಷ್ಣುಮೂರ್ತಿ ದೇವಸ್ಥಾನದ ಬಳಿ 10 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರಿಟೀಕರಣ, ಕೋಡಿಕೆರೆ ಬಳಿ 5 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ, ಕುಳಾಯಿ ಚಿತ್ರಾಪುರ ಶ್ರೀ ವೀರಮಾರುತಿ ಮಂದಿರ ಮತ್ತು ಮಹಾವಿಷ್ಣು ಮಂದಿರದ ಬಳಿ 8 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ, ಕುಳಾಯಿ ಚಿತ್ರಾಪುರ ಪಾಂಡುರಂಗ ಮಂದಿರದ ಬಳಿ 12 ಲಕ್ಷ ರೂ. ವೆಚ್ಚದಲ್ಲಿ ಒಳಚರಂಡಿ ಮತ್ತು ಚಪ್ಪಡಿ ಹಾಕುವಿಕೆ ಕಾಮಗಾರಿಗೆ ಚಾಲನೆ ನೀಡಲಾಯಿತು.