ಬೆಳ್ತಂಗಡಿ: ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಾರಂಭವಾಗಿದ್ದು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಕ್ಕಳಿಗೆ ಹಾಗೂ ಪೋಷಕರಿಗೆ ಧೈರ್ಯ ತುಂಬುವ ಮೂಲಕ ಶುಭ ಹಾರೈಸಿದರು.
ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಬೆಳ್ತಂಗಡಿ ಶಾಸಕ - Mla Harish punja news
ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಾರಂಭವಾಗಿದ್ದು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಕ್ಕಳಿಗೆ ಹಾಗೂ ಪೋಷಕರಿಗೆ ಧೈರ್ಯ ತುಂಬುವ ಮೂಲಕ ಶುಭ ಹಾರೈಸಿದರು.
ಕೋವಿಡ್-19 ಸಂದರ್ಭದಲ್ಲಿ ಪರೀಕ್ಷೆ ನಡೆಯುತ್ತಿರುವುದಕ್ಕೆ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಸ್ವಲ್ಪಮಟ್ಟಿನ ಆತಂಕ ಇರುವುದು ಸ್ವಾಭಾವಿಕ. ಈ ಬಗ್ಗೆ ಪರೀಕ್ಷಾ ಕೇಂದ್ರಗಳಲ್ಲಿ ಬೇಕಾದ ಪೂರ್ವ ತಯಾರಿ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು, ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಉಪಯೋಗಿಸಿ ಪರೀಕ್ಷೆ ನಡೆಸುವ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದರು.
ಇನ್ನು ತಮ್ಮೆಲ್ಲರ ಆರೋಗ್ಯ ಕಾಪಾಡುವ ಕಡೆಗೆ ಸರ್ಕಾರ ಸಂಪೂರ್ಣ ಕಾಳಜಿ ವಹಿಸಿಕೊಂಡಿದೆ. ಯಾವುದೇ ಭಯ ಇಲ್ಲದೆ ಪರೀಕ್ಷೆ ಬರೆಯಿರಿ. ತಾಲೂಕು ಆಡಳಿತ ತೆಗೆದುಕೊಂಡ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಎಂದರು.