ಬೆಳ್ತಂಗಡಿ:ಟೋಲ್ ಸಂಗ್ರಹ ಪ್ರಾರಂಭವಾದ ಬೆನ್ನಲ್ಲೇ ತುರ್ತು ಸೇವಾ ವಾಹನಗಳಿಗೆ ಟೋಲ್ ಸಂಗ್ರಹ ಮಾಡುವ ಬಗ್ಗೆ ಶಾಸಕ ಹರೀಶ್ ಪೂಂಜಾರಿಗೆ ದೂರು ಬಂದಿದ್ದು, ಇದಕ್ಕೆ ತಕ್ಷಣ ಸ್ಪಂದಿಸಿ ಜಿಲ್ಲಾಧಿಕಾರಿಗಳಿಗೆ ಟೋಲ್ ಸಂಗ್ರಹಿಸುವುದನ್ನು ನಿಲ್ಲಿಸುವಂತೆ ಮನವಿ ಮಾಡಿದ್ದಾರೆ.
ತುರ್ತು ಸೇವಾ ವಾಹನಗಳಿಗೆ ಟೋಲ್ ಪಡೆಯದಂತೆ ಶಾಸಕ ಹರೀಶ್ ಪೂಂಜಾ ಮನವಿ - ಶಾಸಕ ಹರೀಶ್ ಪೂಂಜಾ
ತುರ್ತು ಸೇವಾ ವಾಹನಗಳಿಗೆ ಟೋಲ್ ಪಡೆಯದಂತೆ ಶಾಸಕ ಹರೀಶ್ ಪೂಂಜಾ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಶಾಸಕ ಹರೀಶ್ ಪೂಂಜಾ
ಬ್ರಹ್ಮರಕೂಟ್ಲು ಟೋಲ್ನಲ್ಲಿ ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ತುರ್ತು ಸೇವೆಗೆ ಸಿಬ್ಬಂದಿಯನ್ನು ಕರೆದೊಯ್ಯುವ ಆಸ್ಪತ್ರೆಗಳ ವಾಹನಗಳಿಗೆ ಟೋಲ್ ಸಂಗ್ರಹಿಸುತ್ತಿದ್ದುದು ಕಂಡು ಬಂದಿತ್ತು. ಈ ಬಗ್ಗೆ ತುರ್ತು ಸೇವಾ ಸಿಬ್ಬಂದಿ ಅಸಮಾಧಾನ ವ್ಯಕ್ತಪಡಿಸಿ ಶಾಸಕರಿಗೆ ಮನವಿ ಮಾಡಿದ್ದರು. ಶಾಸಕರ ಮನವಿ ಮೇರೆಗೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.