ಕರ್ನಾಟಕ

karnataka

ETV Bharat / state

ಕುಡಿಯುವ ನೀರಿನ ಸ್ಥಾವರದಲ್ಲಿನ ಸಮಸ್ಯೆ ಇತ್ಯರ್ಥಕ್ಕೆ ಸಭೆ: ಶಾಸಕ ರಾಜೇಶ್ ನಾಯ್ಕ್ - ಸಚಿವ ಕೋಟ ಶ್ರೀನಿವಾಸ ಪೂಜಾರಿ

ಬಂಟ್ವಾಳ ಪುರಸಭಾ ವ್ಯಾಪ್ತಿಯ ಸಮಗ್ರ ಕುಡಿಯುವ ನೀರು ಸರಬರಾಜು ಯೋಜನೆ ಸೆಪ್ಟಂಬರ್ 2017ರ ಅವಧಿಯಲ್ಲಿ ಪೂರ್ಣಗೊಂಡು, ಒಂದು ವರ್ಷದ ನಿರ್ವಹಣೆಯ ಬಳಿಕ ಬಂಟ್ವಾಳ ಪುರಸಭೆಗೆ ಹಸ್ತಾಂತರಿಸಬೇಕಾಗಿತ್ತು. ಆದರೆ ಈವರೆಗೂ ಹಸ್ತಾಂತರವಾಗಿಲ್ಲ.

Inspection
Inspection

By

Published : Aug 11, 2020, 4:51 PM IST

ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಇಂದು ಜಕ್ರಿಬೆಟ್ಟುವಿನಲ್ಲಿರುವ ಬಂಟ್ವಾಳ ಪುರಸಭಾ ವ್ಯಾಪ್ತಿಗೊಳಪಟ್ಟ ಸಮಗ್ರ ಕುಡಿಯುವ ನೀರು ಸರಬರಾಜು ಯೋಜನೆಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಇತ್ಯರ್ಥ ಪಡಿಸುವ ಬಗ್ಗೆ ನಿರ್ಧರಿಸಲಾಗಿದೆ ಎಂದು ಅವರು ಈ ವೇಳೆ ತಿಳಿಸಿದರು.

ಬಂಟ್ವಾಳ ಪುರಸಭಾ ವ್ಯಾಪ್ತಿಯ ಸಮಗ್ರ ಕುಡಿಯುವ ನೀರು ಸರಬರಾಜು ಯೋಜನೆ ಸೆಪ್ಟಂಬರ್ 2017ರ ಅವಧಿಯಲ್ಲಿ ಪೂರ್ಣಗೊಂಡು, ಒಂದು ವರ್ಷದ ನಿರ್ವಹಣೆಯ ಬಳಿಕ ಬಂಟ್ವಾಳ ಪುರಸಭೆಗೆ ಹಸ್ತಾಂತರಿಸಬೇಕಾಗಿತ್ತು. ಆದರೆ ಈವರೆಗೂ ಹಸ್ತಾಂತರವಾಗಿಲ್ಲ.

ಶಾಸಕರು ಭೇಟಿ ನೀಡಿ, ಪರಿಶೀಲಿಸಿದ ಸಂದರ್ಭದಲ್ಲಿ ಹಲವಾರು ಸಮಸ್ಯೆಗಳು ಕಂಡು ಬಂದಿವೆ. ಸ್ಥಾವರದ ನಿರ್ವಹಣೆಗಳ ಬಗ್ಗೆ ಬಂಟ್ವಾಳ ಪುರಸಭೆ ಮತ್ತು ನಗರ ನೀರು ಸರಬರಾಜು ಒಳಚರಂಡಿ ಮಂಡಳಿ ಮಧ್ಯೆ ನಿರ್ವಹಣಾ ವೆಚ್ಚಕ್ಕೆ ಸಂಬಂಧಿಸಿದಂತೆ ಗೊಂದಲಗಳಿವೆ. ಈ ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಸ್ಥಳದಿಂದಲೇ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಜೊತೆ ಮಾತುಕತೆ ನಡೆಸಲಾಯಿತು.

ಈ ಸಂದರ್ಭ ನೀರು ಸರಬರಾಜು ಮಂಡಳಿಯ ಸಹಾಯಕ ಕಾರ್ಯನಿರ್ವಾಹಣಾ ಅಧಿಕಾರಿ ಚಂದ್ರಶೇಖರ, ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ, ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಸಹಾಯಕ ಅಭಿಯಂತರರಾದ ಶೋಭಾಲಕ್ಷ್ಮಿ, ಪುರಸಭೆ ಅಭಿಯಂತರ ಡೊಮಿನಿಕ್ ಡಿಮೆಲ್ಲೊ, ಶಾಸಕರ ಆಪ್ತ ಸಹಾಯಕ ದಿನೇಶ್ ಹಾಗೂ ರೇಚಕ ಸ್ಥಾವರದ ಸಿಬ್ಬಂದಿ ಉಪಸ್ಥಿತರಿದ್ದರು.

ABOUT THE AUTHOR

...view details