ಕರ್ನಾಟಕ

karnataka

ETV Bharat / state

ಕೊರೊನಾದಿಂದ ಮೃತಪಟ್ಟ ಶಿಕ್ಷಕಿ ಮನೆಗೆ ಎಂಎಲ್​​​ಸಿ ಭೋಜೇಗೌಡ ಭೇಟಿ - ವಿಧಾನ ಪರಿಷತ್ ಸದಸ್ಯ ಭೋಜೇಗೌಡ

ಸರ್ಕಾರದ ವಿದ್ಯಾಗಮ ಯೋಜನೆಯಡಿ ಪಾಠ ಮಾಡಿ ಕೊರೊನಾ ಸೋಂಕಿಗೊಳಗಾಗಿ ಮೃತಪಟ್ಟ ಮೂಡಬಿದಿರೆಯ ಶಿಕ್ಷಕಿ ಪದ್ಮಾಕ್ಷಿ ಅವರ ಮನೆಗೆ ಭೋಜೇಗೌಡ ಭೇಟಿ ನೀಡಿದ್ದರು.

MLC Bhojegowda visits home of teacher who died from corona
ಕೊರೊನಾದಿಂದ ಮೃತಪಟ್ಟ ಶಿಕ್ಷಕಿ ಮನೆಗೆ ಎಂಎಲ್​​​ಸಿ ಭೋಜೇಗೌಡ ಭೇಟಿ

By

Published : Nov 20, 2020, 8:12 PM IST

ಮೂಡುಬಿದಿರೆ:ರಾಜ್ಯದಲ್ಲಿ ವಿದ್ಯಾಗಮ ಯೋಜನೆಯಡಿಯಲ್ಲಿ ಪಾಠ ಮಾಡಲು ತೆರಳಿರುವ 80ಕ್ಕೂ ಅಧಿಕ ಶಿಕ್ಷಕರು ಕೊರೊನಾ ಸೋಂಕು ತಗುಲಿ ಮೃತಪಟ್ಟಿದ್ದಾರೆ. ಮೃತಪಟ್ಟ ಎಲ್ಲಾ ಶಿಕ್ಷಕರ ಕುಟುಂಬಕ್ಕೆ ತಕ್ಷಣ ಪರಿಹಾರ ಒದಗಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಆಗ್ರಹಿಸಿದ್ದಾರೆ.

ಸರ್ಕಾರದ ವಿದ್ಯಾಗಮ ಯೋಜನೆಯಡಿ ಪಾಠ ಮಾಡಿ ಕೊರೊನಾ ಸೋಂಕಿಗೊಳಗಾಗಿ ಮೃತಪಟ್ಟ ಮೂಡಬಿದಿರೆಯ ಶಿಕ್ಷಕಿ ಪದ್ಮಾಕ್ಷಿ ಅವರ ಮನೆಗೆ ಭೋಜೇಗೌಡ ಭೇಟಿ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ಕೊರೊನಾ ವಾರಿಯರ್ಸ್ ಮೃತಪಟ್ಟರೆ 30 ಲಕ್ಷ ರೂ. ಪರಿಹಾರ ನೀಡುವುದಾಗಿ ಸರ್ಕಾರ ಘೋಷಿಸಿತ್ತು‌. ಆದರೆ ಈವರೆಗೆ ಯಾವ ಶಿಕ್ಷಕರಿಗೂ ಪರಿಹಾರ ಸಿಕ್ಕಿಲ್ಲ. ಈಗ ವಿದ್ಯಾಗಮ ಶಿಕ್ಷಕರನ್ನು ಕೊರೊನಾ ವಾರಿಯರ್ಸ್​​​ನಿಂದ ಹೊರಗಿಟ್ಟು ಅನ್ಯಾಯ ಮಾಡಿದೆ. ಶಿಕ್ಷಕರು, ಪತ್ರಕರ್ತರನ್ನು ಕೊರೊನಾ ವಾರಿಯರ್ಸ್​​ಗೆ ಸೇರ್ಪಡೆಗೊಳಿಸಬೇಕು ಎಂದು ಆಗ್ರಹಿಸಿದರು.

ಕೊರೊನಾದಿಂದ ಮೃತಪಟ್ಟ ಶಿಕ್ಷಕಿ ಮನೆಗೆ ಎಂಎಲ್​​​ಸಿ ಭೋಜೇಗೌಡ ಭೇಟಿ

ಪದ್ಮಾಕ್ಷಿ ಅವರ ಪತಿ ಶಶಿಕಾಂತ ಅವರೊಂದಿಗೆ ಆಸ್ಪತ್ರೆಯ ಚಿಕಿತ್ಸಾ ವೆಚ್ಚ ಪಾವತಿ ಮತ್ತಿತರ ವಿಷಯಗಳ ಕುರಿತು ಚರ್ಚಿಸಿದರು. ಬಳಿಕ ಜಿಲ್ಲಾಧಿಕಾರಿಗಳ ಜೊತೆ ದೂರವಾಣಿಯಲ್ಲಿ ಮಾತನಾಡಿದ ಅವರು, ಪದ್ಮಾಕ್ಷಿ ಮೃತಪಟ್ಟು ಒಂದು ತಿಂಗಳು ಕಳೆದರೂ ಇನ್ನೂ ಆಸ್ಪತ್ರೆಗೆ ಮುಂಗಡವಾಗಿ ಕಟ್ಟಿದ ಹಣ 4.30 ಲಕ್ಷ ರೂ. ಮರುಪಾವತಿಯಾಗಿಲ್ಲ. ಈ ಮೊತ್ತವನ್ನು ಸಂತ್ರಸ್ತ ಕುಟುಂಬಕ್ಕೆ ಕೂಡಲೇ ಒದಗಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್, ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ರಾಜಶ್ರೀ, ದ.ಕ ಜಿಲ್ಲಾ ಹಿಂದಿ ಅಧ್ಯಾಪಕರ ಸಂಘದ ಜಿಲ್ಲಾಧ್ಯಕ್ಷ ರಾಯಿ ರಾಜ್‍ಕುಮಾರ್, ಜಿಲ್ಲಾ ಸಹಶಿಕ್ಷಕರ ಸಂಘದ ಉಪಾಧ್ಯಕ್ಷ ಮಾರ್ಕ್ ಮಂಡೋನ್ಸಾ ಮತ್ತಿತರರು ಉಪಸ್ಥಿತರಿದ್ದರು.

ABOUT THE AUTHOR

...view details