ಬಂಟ್ವಾಳ(ದಕ್ಷಿಣ ಕನ್ನಡ):ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮನೆಗೆ ಭಾನುವಾರ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಭೇಟಿ ನೀಡಿದ್ದರು. ಈ ವೇಳೆ ಕೇಂದ್ರ ಸರ್ಕಾರವು ಇತ್ತೀಚೆಗೆ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವ ಪರೇಡ್ನಿಂದ ಕೈಬಿಟ್ಟ ಬಗ್ಗೆ ಚರ್ಚಿಸಿದರು.
ಜನಾರ್ದನ ಪೂಜಾರಿ, ಬಿ.ಕೆ. ಹರಿಪ್ರಸಾದ್ ಭೇಟಿ.. ನಾರಾಯಣಗುರು ಸ್ತಬ್ಧಚಿತ್ರ ತಿರಸ್ಕಾರ ವಿಚಾರ ಕುರಿತು ಚರ್ಚೆ - ಜನಾರ್ದನ ಪೂಜಾರಿ, ಬಿಕೆ ಹರಿಪ್ರಸಾದ್ ಭೇಟಿ
ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರು ಈ ವಿಚಾರದಲ್ಲಿ ಕೈಗೊಳ್ಳುವ ತೀರ್ಮಾನವನ್ನು ಬಿ.ಕೆ.ಹರಿಪ್ರಸಾದ್ ಬೆಂಬಲಿಸುವುದಾಗಿ ತಿಳಿಸಿದ್ದಾರೆ. ಇದಲ್ಲದೇ, ಬ್ರಹ್ಮಶ್ರೀ ನಾರಾಯಣಗುರು ಅವರ ಸ್ತಬ್ಧಚಿತ್ರ ತಿರಸ್ಕೃತವಾಗಿರುವುದು ಮತ್ತು ಕಾಂಗ್ರೆಸ್ ಪಕ್ಷದ ಇತ್ತೀಚಿನ ಬೆಳವಣಿಗೆಗಳ ಕುರಿತು ಅವರು ಚರ್ಚಿಸಿದರು ಎಂದು ತಿಳಿದುಬಂದಿದೆ.
![ಜನಾರ್ದನ ಪೂಜಾರಿ, ಬಿ.ಕೆ. ಹರಿಪ್ರಸಾದ್ ಭೇಟಿ.. ನಾರಾಯಣಗುರು ಸ್ತಬ್ಧಚಿತ್ರ ತಿರಸ್ಕಾರ ವಿಚಾರ ಕುರಿತು ಚರ್ಚೆ hariprasad-met](https://etvbharatimages.akamaized.net/etvbharat/prod-images/768-512-14265778-thumbnail-3x2-ddd.jpg)
ಹರಿಪ್ರಸಾದ್ ಭೇಟಿ
ಜನಾರ್ದನ ಪೂಜಾರಿ ಅವರು ಈ ವಿಚಾರದಲ್ಲಿ ಕೈಗೊಳ್ಳುವ ತೀರ್ಮಾನವನ್ನು ಬಿ.ಕೆ. ಹರಿಪ್ರಸಾದ್ ಬೆಂಬಲಿಸುವುದಾಗಿ ತಿಳಿಸಿದ್ದಾರೆ. ಇದಲ್ಲದೇ, ಬ್ರಹ್ಮಶ್ರೀ ನಾರಾಯಣಗುರು ಅವರ ಸ್ತಬ್ಧಚಿತ್ರ ತಿರಸ್ಕಾರದ ಜತೆಗೆ ಕಾಂಗ್ರೆಸ್ ಪಕ್ಷದ ಇತ್ತೀಚಿನ ಬೆಳವಣಿಗೆಗಳ ಕುರಿತಂತೆಯೂ ಅವರು ಚರ್ಚಿಸಿದರು ಎಂದು ತಿಳಿದುಬಂದಿದೆ.
ಈ ಸಂದರ್ಭ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಮಹಾನಗರ ಪಾಲಿಕೆ ಸದಸ್ಯ ಅಬ್ದುಲ್ ರವೂಫ್, ಚಿತ್ತರಂಜನ್ ಶೆಟ್ಟಿ ಉಪಸ್ಥಿತರಿದ್ದರು.