ಸುಳ್ಯ : ಕಡಬ ತಾಲೂಕಿನ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ ನೀಡಿ ದೇವರ ದರ್ಶನ ಪಡೆದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ MLC ಪ್ರತಾಪ್ ಸಿಂಹ ನಾಯಕ್ ಭೇಟಿ - Mangalore MLC Pratap Sinha Nayak visit Kukke Sri News
ಸುಬ್ರಹ್ಮಣ್ಯದಲ್ಲಿ ದೇವರ ದರ್ಶನ ಪಡೆದ ನಂತರ ಕಡಬಕ್ಕೆ ಮತ್ತು ಸುಳ್ಯಕ್ಕೆ ಆಗಮಿಸಿದ ಪ್ರತಾಪ್ ಸಿಂಹ ಅವರಿಗೆ ಅಭಿನಂದನಾ ಕಾರ್ಯಕ್ರಮಗಳು ನಡೆದವು.
ನಂತರ ಸುಳ್ಯ, ಕಡಬ ತಾಲೂಕುಗಳಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್ ಅವರು ಪ್ರತಾಪ್ ಸಿಂಹರನ್ನು ಬರಮಾಡಿಕೊಂಡರು. ಸುಬ್ರಹ್ಮಣ್ಯದಲ್ಲಿ ದೇವರ ದರ್ಶನ ಪಡೆದ ನಂತರ ಕಡಬಕ್ಕೆ ಮತ್ತು ಸುಳ್ಯಕ್ಕೆ ಆಗಮಿಸಿದ ಪ್ರತಾಪ್ ಸಿಂಹ ಅವರಿಗೆ ಅಭಿನಂದನಾ ಕಾರ್ಯಕ್ರಮಗಳು ನಡೆದವು.
ಸುಳ್ಯದ ಗಾಂಧಿನಗರದಲ್ಲಿ ವಾಸವಾಗಿರುವ ಬಿಜೆಪಿಯ ಹಿರಿಯ ಮುಂದಾಳು ಉಮೇಶ್ ವಾಗ್ಲೆ ಅವರ ಮನೆಗೆ ಭೇಟಿ ನೀಡಿದ ಪ್ರತಾಪ್ ಸಿಂಹ ಅವರು ಉಮೇಶ್ ವಾಗ್ಲೆಯವರ ಆರೋಗ್ಯದ ಬಗ್ಗೆ ವಿಚಾರಿಸಿ ಅವರ ಆಶೀರ್ವಾದ ಪಡೆದರು. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ಅಂಗಾರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕಡಬ, ಸುಳ್ಯ ಪ್ರದೇಶದ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.